LIVE | ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ! ಆಲಿಕಲ್ಲು ಮಳೆಗೆ ನೆಲಕಚ್ಚಿದ ಬೆಳೆಗಳು: ರೈತ ಕಂಗಾಲು
ಇತ್ತೀಚೆಗೆ ರಾಜ್ಯದ ಹಲವೆಡೆ ದಿಢೀರನೆ ಸುರಿದ ಆಲಿಕಲ್ಲು ಮಳೆಯಿಂದಾಗಿ ರೈತರು ಬೆಳೆದಿದ್ದ ಬೆಳೆಗಳು ಸಂಪೂರ್ಣವಾಗಿ ನಾಶವಾಗಿವೆ. ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದ್ದು, ರೈತರು ಕಣ್ಣೀರಲ್ಲಿ ಕೈ ತೊಳೆಯುವಂತಾಗಿದೆ. ಈ ಮಳೆಯ ಆರ್ಭಟಕ್ಕೆ ದಾಳಿಂಬೆ, ಮಾವು, ದ್ರಾಕ್ಷಿ, ಜೋಳ ಹಾಗೂ ಸೂರ್ಯಕಾಂತಿ ಸೇರಿದಂತೆ ಪ್ರಮುಖ ವಾಣಿಜ್ಯ ಬೆಳೆಗಳು ನೆಲಕಚ್ಚಿವೆ. ಸಾಲ ಮಾಡಿ ಬೆಳೆದಿದ್ದ ಬೆಳೆ ಕಣ್ಣೆದುರೇ ಹಾಳಾಗುತ್ತಿರುವುದನ್ನು ಕಂಡು ಅನ್ನದಾತ ಕಂಗಾಲಾಗಿದ್ದಾನೆ.