LIVE | ಭ್ರಷ್ಟಾಚಾರ ತುಂಬಿದ ರಾಜ್ಯ ಸರ್ಕಾರದ ವಿರುದ್ಧ ಹೋರಾಟವೇ ಮುಖ್ಯ ಗುರಿ: ಕುಮಾರಸ್ವಾಮಿ ಸ್ಪಷ್ಟನೆ
ಬೆಂಗಳೂರಿನಲ್ಲಿ ಇಂದು ಮಾತನಾಡಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ರಾಜ್ಯದ ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆದು ಜನತಾ ಸರ್ಕಾರವನ್ನು ತರುವುದೇ ತಮ್ಮ ಮೊದಲ ಆದ್ಯತೆ ಎಂದು ಸ್ಪಷ್ಟಪಡಿಸಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಲ್ಲಿ ಗೊಂದಲವಿದೆ ಎಂಬ ಊಹಾಪೋಹಗಳಿಗೆ ತೆರೆ ಎಳೆದ ಅವರು, ಮುಂದಿನ ಮುಖ್ಯಮಂತ್ರಿ ಯಾರಾಗಬೇಕು ಎನ್ನುವುದಕ್ಕಿಂತ ಈ ಸರ್ಕಾರವನ್ನು ತೊಲಗಿಸುವುದು ಮುಖ್ಯ ಎಂದರು. ಇತ್ತೀಚೆಗೆ ಬಿಜೆಪಿ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು 'ಯಾರು ಹೆಚ್ಚು ಸ್ಥಾನ ಗೆಲ್ಲುತ್ತಾರೋ ಅವರು ಸಿಎಂ ಆಗುತ್ತಾರೆ' ಎಂದು ನೀಡಿದ್ದ ಹೇಳಿಕೆಗೂ ಕುಮಾರಸ್ವಾಮಿ ಇದೇ ವೇಳೆ ಪ್ರತಿಕ್ರಿಯೆ ನೀಡಿದರು.