LIVE | ಕಬ್ಬು ಬೆಳೆಗಾರರ ಹೋರಾಟಕ್ಕೆ ಜಯ: ಸರ್ಕಾರದ ನಿರ್ಧಾರದ ಬಗ್ಗೆ ಬಿಜೆಪಿ ಹೇಳಿದ್ದೇನು?
ಕಬ್ಬು ಬೆಳೆಗಾರರ ನಿರಂತರ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರ, ಪ್ರತಿ ಟನ್ ಕಬ್ಬಿಗೆ ದರ ನಿಗದಿಪಡಿಸಿದೆ. ಈ ಮಹತ್ವದ ಬೆಳವಣಿಗೆಯ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ್ದಾರೆ. ಇದು ರಾಜ್ಯದ ರೈತರು ಮತ್ತು ಬಿಜೆಪಿ ಜಂಟಿಯಾಗಿ ನಡೆಸಿದ ಹೋರಾಟಕ್ಕೆ ಸಂದ ಜಯ. ನಾವು ರೈತರ ಪರವಾಗಿ ಧ್ವನಿ ಎತ್ತಿದ್ದರಿಂದ ಸರ್ಕಾರ ಎಚ್ಚೆತ್ತುಕೊಂಡಿದೆ," ಎಂದು ವಿಜಯೇಂದ್ರ ತಿಳಿಸಿದರು. ಸರ್ಕಾರದ ಈ ನಿರ್ಧಾರದ ಬಗ್ಗೆ ಬಿಜೆಪಿ ನಿಲುವೇನು? ರೈತರ ಮುಂದಿನ ಹೋರಾಟಕ್ಕೆ ಅವರ ಬೆಂಬಲ ಹೇಗಿರಲಿದೆ? ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.


