LIVE | ಸಿಎಂ ಆಪ್ತರು ವಿದೇಶದಲ್ಲಿದ್ದಾಗಲೇ ಜಾರಕಿಹೊಳಿ ಟೀಂ ದೆಹಲಿಗೆ ಹೋಗಿದ್ದೇಕೆ? ರಾಜಕಾರಣದಲ್ಲಿ ಬಿಗ್ ಟ್ವಿಸ್ಟ್!

21 Feb 2026 5:54 PM IST

ವಿಷಯ: ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಹಾಗೂ ಅಧಿಕಾರ ಹಸ್ತಾಂತರದ ಚರ್ಚೆ ತಾರಕಕ್ಕೇರಿರುವ ಬೆನ್ನಲ್ಲೇ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದ ಶಾಸಕರ ತಂಡ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿರುವುದು ಭಾರೀ ಸಂಚಲನ ಮೂಡಿಸಿದೆ. ವಿಶೇಷವೆಂದರೆ, ಸಿಎಂ ಸಿದ್ದರಾಮಯ್ಯ ಅವರ ಆಪ್ತ ಶಾಸಕರ ಒಂದು ಗುಂಪು ವಿದೇಶ ಪ್ರವಾಸದಲ್ಲಿರುವಾಗಲೇ, ಇತ್ತ ಸತೀಶ್ ಜಾರಕಿಹೊಳಿ ಅವರು ಪ್ರಮುಖ ಶಾಸಕರಾದ ಕೆ.ಎನ್. ರಾಜಣ್ಣ, ಕೋನರೆಡ್ಡಿ, ಬಸವಂತಪ್ಪ ಮಾಯಕೊಂಡ ಅವರೊಂದಿಗೆ ದೆಹಲಿಯಲ್ಲಿ ಖರ್ಗೆ ಅವರನ್ನು ಭೇಟಿಯಾಗಿರುವುದು ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ.