NEET ಪರೀಕ್ಷೆ ರದ್ದು, ಕಂಗಾಲಾದ ವಿದ್ಯಾರ್ಥಿಗಳು: ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಗೆ ಕಾಂತಕುಮಾರ್ ಆಗ್ರಹ | NEET UG
ದೇಶಾದ್ಯಂತ ವೈದ್ಯಕೀಯ ಶಿಕ್ಷಣ ಪ್ರವೇಶಾತಿಗಾಗಿ ನಡೆದಿದ್ದ ನೀಟ್ ಯುಜಿ (NEET UG 2026) ಪರೀಕ್ಷೆಯನ್ನು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (NTA) ಅಧಿಕೃತವಾಗಿ ರದ್ದುಗೊಳಿಸಿದೆ. ಪ್ರಶ್ನೆ ಪತ್ರಿಕೆ ಸೋರಿಕೆ (Paper Leak) ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ, ಪರೀಕ್ಷೆಯ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆಯನ್ನು ಕಾಪಾಡಲು ಎನ್‌ಟಿಎ ಈ ಕಠಿಣ ಕ್ರಮ ಕೈಗೊಂಡಿದೆ. ಏಕಾಏಕಿ ಪರೀಕ್ಷೆ ರದ್ದುಗೊಳಿಸಿರುವುದರಿಂದ ಲಕ್ಷಾಂತರ ವಿದ್ಯಾರ್ಥಿಗಳು ಮತ್ತು ಪೋಷಕರು ತೀವ್ರ ಆತಂಕಗೊಂಡಿದ್ದಾರೆ. ಈ ಕುರಿತು ಅಖಿಲ ಕರ್ನಾಟಕ ವಿದ್ಯಾರ್ಥಿ ಸಂಘಟನೆಯ (AKSA) ರಾಜ್ಯಾಧ್ಯಕ್ಷರಾದ ಆರ್. ಕಾಂತಕುಮಾರ್ ಅವರು 'ದಿ ಫೆಡರಲ್ ಕರ್ನಾಟಕ'ದ ಜೊತೆ ವಿಶೇಷವಾಗಿ ಮಾತನಾಡಿದ್ದಾರೆ. ಪರೀಕ್ಷಾ ಅಕ್ರಮದಲ್ಲಿ ಭಾಗಿಯಾದ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿರುವ ಅವರು, ಭವಿಷ್ಯದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ತಡೆಯಲು ಸರ್ಕಾರ ಹಾಗೂ NTA ಕೈಗೊಳ್ಳಬೇಕಾದ ಕಟ್ಟುನಿಟ್ಟಿನ ಕ್ರಮಗಳ ಬಗ್ಗೆ ಮಹತ್ವದ ಸಲಹೆಗಳನ್ನು ನೀಡಿದ್ದಾರೆ. ಸಂಪೂರ್ಣ ಮಾಹಿತಿಗಾಗಿ ಈ ವಿಡಿಯೋ ನೋಡಿ.