ಲಾಲ್‌ಬಾಗ್‌ನಲ್ಲಿ ಸುರಂಗ ರಸ್ತೆ ನಿರ್ಮಾಣ ಕೈ ಬಿಡಲು ನಡಿಗೆದಾರರ ಸಂಘದ ಅಧ್ಯಕ್ಷ ಎಸ್. ಉಮೇಶ್‌ ಆಗ್ರಹ

2 Nov 2025 12:26 AM IST

ಬೆಂಗಳೂರಿನ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳಲು ಸರ್ಕಾರ ಸುರಂಗ ರಸ್ತೆ ಯೋಜನೆ ಜಾರಿಗೆ ಮುಂದಾಗಿದೆ. ಹೆಬ್ಬಾಳದಿಂದ ಸಿಲ್ಕ್‌ಬೋರ್ಡ್‌ವರೆಗೆ ಬರೋಬ್ಬರಿ 18 ಸಾವಿರ ಕೋಟಿ ರೂಪಾಯಿ ಬೃಹತ್‌ ಮೊತ್ತದ ಯೋಜನೆ ಇದು. ಟ್ರಾಫಿಕ್‌ ಸಮಸ್ಯೆ ಕಡಿಮೆಯಾಗಬೇಕು, ನಿಜ. ಆದರೆ ಅದಕ್ಕೆ ಲಾಲ್‌ಬಾಗ್‌ ಅನ್ನೇ ಬಲಿಕೊಡಬೇಕಾ? ಎಂಬುದು ಪರಿಸರ ಪ್ರೇಮಿಗಳ ಪ್ರಶ್ನೆಯಾಗಿದೆ.