ಬೀದರ್ ನಲ್ಲಿ ರೌಡಿಶೀಟರ್ ಕಾಲಿಗೆ ಗುಂಡು ಹಾರಿಸಿದ ಪೊಲೀಸರು
ಅಪಹರಣ ಪ್ರಕರಣದಲ್ಲಿ ಭಾಗಿಯಾಗಿ ಪೊಲೀಸರಿಂದ ತಪ್ಪಿಸಿಕೊಂಡಿದ್ದ ರೌಡಿಶೀಟರ್ ಅನ್ನು ಬಂಧಿಸಲು ಮುಂದಾದ ಪೊಲೀಸರ ಮೇಲೆ ರೌಡಿ ಮಚ್ಚಿನಿಂದ ಹಲ್ಲೆ ನಡೆಸಲು ಮುಂದಾಗಿದ್ದು, ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿದ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಕುರುಬಕೇಳಗಿ ಗ್ರಾಮದಲ್ಲಿ ನಡೆದಿದೆ.
