ಆರ್‌ಎಸ್‌ಎಸ್ ವಿರುದ್ಧ ಕಾಂಗ್ರೆಸ್ ಹೊಸ ಸಮರ! ಖರ್ಗೆ ಪತ್ರ, ಗೆಹ್ಲೋಟ್ ಸವಾಲ್, ಇದು ರಾಹುಲ್ ಗಾಂಧಿಯ ಮಾಸ್ಟರ್?
ಕರ್ನಾಟಕ ಸಚಿವ ಪ್ರಿಯಾಂಕ್ ಖರ್ಗೆ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಬರೆದ ಪತ್ರ ದೇಶದ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಆರ್‌ಎಸ್‌ಎಸ್ ನೋಂದಣಿ ಆಗಿಲ್ಲ ಯಾಕೆ ಎಂಬ ಪ್ರಶ್ನೆಯನ್ನು ಖರ್ಗೆ ಎತ್ತಿದ್ದು, ಈ ವಿಚಾರವನ್ನು ದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸುವ ಮೂಲಕ ರಾಷ್ಟ್ರ ಮಟ್ಟದ ಚರ್ಚೆಯನ್ನಾಗಿ ಮಾಡಿದ್ದಾರೆ. ಇದರ ಬೆನ್ನಲ್ಲೇ ಕಾಂಗ್ರೆಸ್ ಹಿರಿಯ ನಾಯಕ ಅಶೋಕ್ ಗೆಹ್ಲೋಟ್ ಬಿಜೆಪಿ ಮತ್ತು ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, "ಇಂದಿರಾ ಗಾಂಧಿ ಇದ್ದರೆ ಬಿಜೆಪಿ ನಿಷೇಧಿಸುತ್ತಿದ್ದರು" ಎಂಬ ಹೇಳಿಕೆ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಈ ಬೆಳವಣಿಗೆಗಳು ಕೇವಲ ನಾಯಕರ ವೈಯಕ್ತಿಕ ಅಭಿಪ್ರಾಯಗಳೇ? ಅಥವಾ ಕಾಂಗ್ರೆಸ್ ಹೈಕಮಾಂಡ್ ಮತ್ತು ರಾಹುಲ್ ಗಾಂಧಿಯ ಸೈದ್ಧಾಂತಿಕ ರಾಜಕೀಯ ತಂತ್ರದ ಭಾಗವೇ? ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ಕಾಂಗ್ರೆಸ್ ಹೊಸ ಹೋರಾಟ ಆರಂಭಿಸಿರುವ ಸೂಚನೆಯೇ?