ಆರ್‌ಸಿಬಿ - ಸಿಎಸ್‌ಕೆ ಹೈವೋಲ್ಟೇಜ್ ಪಂದ್ಯಕ್ಕೆ ಕ್ಷಣಗಣನೆ

15 May 2024 6:29 PM GMT  ( Updated:2024-05-16 03:15:56  )

ಐಪಿಎಲ್ ಪಾಯಿಂಟ್ ಪಟ್ಟಿಯಲ್ಲಿ 10ನೇ ಸ್ಥಾನದಲ್ಲಿದ್ದ ಬೆಂಗಳೂರು ರಾಯಲ್ ಚಾಲೆಂಜರ್ಸ್ ಸತತ ಐದು ಪಂದ್ಯಗಳನ್ನು ಗೆಲ್ಲುವ ಮೂಲಕ ಪಾಯಿಂಟ್ ಪಟ್ಟಿಯಲ್ಲಿ ಆರನೇ ಸ್ಥಾನಕ್ಕೆ ಜಿಗಿದಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮೇ 18ರಂದು ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಬೆಂಗಳೂರು ರಾಯಲ್ ಚಾಲೆಂಜರ್ಸ್ ಮುಖಾಮುಖಿಯಾಗಲಿದ್ದು, ಈ ಪಂದ್ಯ ಎರಡೂ ತಂಡಗಳಿಗೂ ನಿರ್ಣಾಯಕವಾಗಿದೆ. ಹಲವು ರೋಚಕ ತಿರುವುಗಳ ಮೂಲಕ ಪ್ಲೇಆಫ್ ಕನಸು ಕಾಣುತ್ತಿರುವ ಆರ್‌ಸಿಬಿ ತಂಡವು ಸಿಎಸ್‌ಕೆ ವಿರುದ್ಧ ಗೆಲ್ಲಲ್ಲೇಬೇಕಿದೆ.