LIVE | ಕುತೂಹಲ ಕೆರಳಿಸಿದ್ದ ಸಿದ್ದರಾಮಯ್ಯ, ಡಿ.ಕೆ.ಶಿ ಮತ್ತು ರಾಹುಲ್ ಗಾಂಧಿ ಭೇಟಿಯಲ್ಲಿ ಏನಾಯಿತು?
ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಮೊದಲ ಬಾರಿಗೆ ರಾಹುಲ್ ಗಾಂಧಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭೇಟಿಯಾಗಿದ್ದು ಸಾಕಷ್ಟು ಕುತೂಹಲ ಮೂಡಿಸಿತ್ತು. ತಮಿಳುನಾಡಿಗೆ ಹೋಗುವ ಮಾರ್ಗಮಧ್ಯೆ ಮೈಸೂರಿಗೆ ಆಗಮಿಸಿದ ರಾಹುಲ್ ಗಾಂಧಿಯನ್ನು ವಿಮಾನ ನಿಲ್ದಾಣದಲ್ಲಿ ಈ ಇಬ್ಬರೂ ನಾಯಕರು ಭೇಟಿಯಾಗಿ ಸಮಾಲೋಚನೆ ನಡೆಸಿದರು. ರಾಜಕೀಯ ವಿದ್ಯಮಾನಗಳ ಬಗ್ಗೆ, ಅದರಲ್ಲೂ ಮುಖ್ಯವಾಗಿ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಏನಾದರೂ ಚರ್ಚೆ ನಡೆಯಿತಾ? ಹೈಕಮಾಂಡ್ ಸೂಚನೆ ಏನಿರಬಹುದು? ಎಂಬ ಚರ್ಚೆಗಳು ರಾಜಕೀಯ ವಲಯದಲ್ಲಿ ಜೋರಾಗಿತ್ತು. ಆದರೆ, ಅಸಲಿಗೆ ಈ ಭೇಟಿಯಲ್ಲಿ ಯಾವುದೇ ರಾಜಕೀಯ ಚರ್ಚೆಗಳೇ ನಡೆದಿಲ್ಲ ಎಂಬ ಮಾಹಿತಿ ಈಗ ಹೊರಬಿದ್ದಿದೆ. ಹಾಗಾದರೆ ಆ 15 ನಿಮಿಷಗಳ ಭೇಟಿಯಲ್ಲಿ ನಡೆದಿದ್ದೇನು? ಸಂಪೂರ್ಣ ವಿವರಣೆಗೆ ಈ ವಿಡಿಯೋ ನೋಡಿ.