LIVE | ಎಸ್ಐಆರ್ ಜಾಗೃತ ಸಮಾವೇಶ, ಬಿಡದಿಯಲ್ಲಿ ಅಪ್ಪಿಕೋ ಚಳವಳಿ, ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ; ನಾಲ್ವರ ಬಂಧನ

28 Jun 2026 6:12 PM IST

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಮೈಸೂರಿನಲ್ಲಿ ನಡೆದ ಎಸ್‌ಐಆರ್‌ ವಿಭಾಗೀಯ ಜಾಗೃತಿಸಮಾವೇಶದಲ್ಲಿ ಎಸ್‌ಐಆರ್‌ ಪರಿಷ್ಕರಣೆ ವೇಳೆ ವಹಿಸಬೇಕಾದ ಎಚ್ಚರಿಕೆಗಳ ಕುರಿತು ಅರಿವು ಮೂಡಿಸಲಾಯಿತು. ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ಪರಿಸರ ಆಂದೋಲನ ‘ಅಪ್ಪಿಕೋ ಚಳುವಳಿ’ ಇದೀಗ ರಾಮನಗರ ಜಿಲ್ಲೆಯ ಬಿಡದಿಯಲ್ಲಿ ಮರುಜನ್ಮ ಪಡೆದಿದೆ. ಚಿಕ್ಕಬಳ್ಳಾಪುರ ನಗರದಲ್ಲಿ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡ ಜಯಂತಿ ಮಹೋತ್ಸವದ ವೇಳೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರ ಮೇಲೆ ಚಪ್ಪಲಿ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಡೀ ರಾತ್ರಿ ಕಾರ್ಯಾಚರಣೆ ನಡೆಸಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.