ಸಿದ್ದರಾಮಯ್ಯ ಅವರು ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಬೆಂಬಲಿಗರ ಆಗ್ರಹ, ಕುರುಬ ಸಂಘದ ಸಭೆಯಲ್ಲಿ ಪ್ರಸ್ತಾಪ

28 Nov 2025 6:18 PM IST

ಮುಖ್ಯಮಂತ್ರಿ ಸ್ಥಾನ ಬದಲಾವಣೆ ಚರ್ಚೆಗಳ ಬೆನ್ನಲ್ಲೇ ಕಾಂಗ್ರೆಸ್ ನಲ್ಲಿ ಮಹಾ ಬೆಳವಣಿಗೆಗಳು ನಡೆಯುತ್ತಿದೆ. ಸಿದ್ದರಾಮಯ್ಯ ಪರವಾಗಿ ರಾಜ್ಯ ಕುರುಬ ಸಂಘ ಅಖಾಡಕ್ಕಿಳಿದಿದೆ. ಇಂದು ಸಂಘದ ಎಲ್ಲಾ ಜಿಲ್ಲಾಧ್ಯಕ್ಷರ ಸಭೆಯಲ್ಲಿ ಸಿದ್ದರಾಮಯ್ಯ ಸಿಎಂ ಸ್ಥಾನದಿಂದ ತೆಗೆಯಬಾರದು ಎಂದು ಹೈಕಮಾಂಡ್ ಗೆ ಎಚ್ಚರಿಕೆ ನೀಡಿದರು. ಇದೇ ವೇಳೆ ಸಭೆಯಲ್ಲಿ ಸಿದ್ದರಾಮಯ್ಯ ಸಿಎಂ ಸ್ಥಾನದಿಂದ ಇಳಿದರೆ ರಾಜ್ಯದಲ್ಲಿ ಹೊಸ ಪ್ರಾದೇಶಿಕ ಪಕ್ಷ ಕಟ್ಟಬೇಕು ಎಂದು ಪ್ರಸ್ತಾಪ ಅಯಿತು.‌ ಹೊಸ ಪಕ್ಷದ ಪ್ರಸ್ತಾಪ ಮಾಡಿದ ಸಂಘದ ನಿರ್ದೇಶಕ ನೀಲಕಂಠ ಬೇವಿನ್ ಅವರ ಸಂದರ್ಶನ.