SSLC Result 2024 | ಬಾಗಲಕೋಟೆಯ ಬಾಲಕಿ ರಾಜ್ಯಕ್ಕೆ ಪ್ರಥಮ
ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಿದೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮೆಳ್ಳಿಗೇರಿ ಮೊರಾರ್ಜಿ ದೇಸಾಯಿ ಶಿಕ್ಷಣ ಸಂಸ್ಥೆ ವಿದ್ಯಾರ್ಥಿನಿ ಅಂಕಿತಾ ಕೊನ್ನೂರ್ ರಾಜ್ಯಕ್ಕೆ ಪ್ರಧಮ ಸ್ಥಾನ ಗಳಿಸಿದ್ದಾರೆ. ಮುಧೋಳ ತಾಲೂಕಿನ ವಜ್ರಮಟ್ಟಿ ಗ್ರಾಮದ ಅಂಕಿತಾ ಕೊನ್ನೂರು ಜಿಲ್ಲೆಯ ಪ್ರತಿಷ್ಠೆಯನ್ನು ಹೆಚ್ಚಿಸಿದ್ದಾರೆ.
