ಸುವರ್ಣಸೌಧ LIVE: ಇಂದು ಪರಿಷತ್ ಕಲಾಪದಲ್ಲಿ ಚರ್ಚೆಯಾಗುತ್ತಿರುವ ಪ್ರಮುಖ ವಿಷಯಗಳೇನು?

9 Dec 2025 11:57 AM IST

ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನ (Winter Session) ಎರಡನೇ ದಿನಕ್ಕೆ ಕಾಲಿಟ್ಟಿದೆ. ಇಂದಿನ ವಿಧಾನ ಪರಿಷತ್ ಕಲಾಪದಲ್ಲಿ ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳು, ಅಭಿವೃದ್ಧಿ ಕಾಮಗಾರಿಗಳು ಮತ್ತು ರೈತರ ಸಂಕಷ್ಟಗಳ ಕುರಿತು ಮಹತ್ವದ ಚರ್ಚೆಗಳು ನಡೆಯುತ್ತಿವೆ. ಪ್ರಶ್ನೋತ್ತರ ಅವಧಿಯಲ್ಲಿ ವಿರೋಧ ಪಕ್ಷದ ಸದಸ್ಯರು ಸರ್ಕಾರದ ಕಾರ್ಯವೈಖರಿಯನ್ನು ಪ್ರಶ್ನಿಸಿದ್ದು, ಆಡಳಿತ ಪಕ್ಷದಿಂದ ಉತ್ತರ ನೀಡಲಾಗಿದೆ.