x

ಬೆಂಗಳೂರಿನಲ್ಲಿ 8 ವರ್ಷವಾದರೂ ಪೂರ್ಣಗೊಳ್ಳದ 2.38 ಕಿ.ಮೀ ಈಜಿಪುರ ಮೇಲ್ಸೇತುವೆ; ಸಾರ್ವಜನಿಕರ ಆಕ್ರೋಶ!

9 April 2026 10:11 AM IST

ಸಿಲಿಕಾನ್ ಸಿಟಿ ಬೆಂಗಳೂರಿನ ಅತ್ಯಂತ ಜನನಿಬಿಡ ಪ್ರದೇಶಗಳಲ್ಲಿ ಒಂದಾದ ಈಜಿಪುರದಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಕೈಗೆತ್ತಿಕೊಂಡ 2.38 ಕಿಲೋಮೀಟರ್ ಉದ್ದದ ಮೇಲ್ಸೇತುವೆ ಕಾಮಗಾರಿ ಈಗ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದೆ. ಕಳೆದ 8 ವರ್ಷಗಳಿಂದ ಈ ಕಾಮಗಾರಿ ನಡೆಯುತ್ತಿದ್ದರೂ, ಇದುವರೆಗೂ ಪೂರ್ಣಗೊಂಡಿಲ್ಲ. ಅರ್ಧಕ್ಕೆ ನಿಂತಿರುವ ಪಿಲ್ಲರ್‌ಗಳು ಮತ್ತು ಕಿಷ್ಕಿಂದೆಯಂತಾಗಿರುವ ರಸ್ತೆಗಳಿಂದಾಗಿ ವಾಹನ ಸವಾರರು ಮತ್ತು ಸ್ಥಳೀಯ ನಿವಾಸಿಗಳು ನಿತ್ಯ ನರಕಯಾತನೆ ಅನುಭವಿಸುತ್ತಿದ್ದಾರೆ. ಕಾಮಗಾರಿ ವಿಳಂಬಕ್ಕೆ ಕಾರಣವೇನು? ಅಧಿಕಾರಿಗಳು ಮತ್ತು ಗುತ್ತಿಗೆದಾರರ ನಿರ್ಲಕ್ಷ್ಯದ ಬಗ್ಗೆ ಜನಸಾಮಾನ್ಯರು ಏನಂತಾರೆ? ಈ ಬಗ್ಗೆ ದ ಫೆಡರಲ್ ಕರ್ನಾಟಕ ನಡೆಸಿದ ಸಮಗ್ರ ಗ್ರೌಂಡ್ ರಿಪೋರ್ಟ್ ಇಲ್ಲಿದೆ.