ಬಜೆಟ್ ಬಳಿಕ ಹೋರಾಟ ಫಿಕ್ಸ್! ತುಳು ಭಾಷೆಯ ಮಾನ್ಯತೆಗಾಗಿ ಶಾಸಕರಿಂದ ಎಚ್ಚರಿಕೆ
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಜನರ ದಶಕಗಳ ಬೇಡಿಕೆಯಾದ 'ತುಳು' ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ ರಾಜ್ಯ ಭಾಷೆಯನ್ನಾಗಿ ಘೋಷಿಸಲು ಒತ್ತಾಯ ಕೇಳಿಬಂದಿದೆ. ಈ ಕುರಿತು ಶಾಸಕರು ಸರ್ಕಾರಕ್ಕೆ ಸ್ಪಷ್ಟ ಗಡುವು ನೀಡಿದ್ದು, ಮುಂಬರುವ ಬಜೆಟ್‌ನಲ್ಲಿ ಈ ಬಗ್ಗೆ ಅಧಿಕೃತ ಘೋಷಣೆಯಾಗದಿದ್ದರೆ ಬೃಹತ್ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಕರಾವಳಿಯ ಸಾಂಸ್ಕೃತಿಕ ಅಸ್ಮಿತೆಯಾಗಿರುವ ತುಳು ಭಾಷೆಗೆ ಸಾಂವಿಧಾನಿಕ ಮಾನ್ಯತೆ ಮತ್ತು ರಾಜ್ಯದ ಎರಡನೇ ಭಾಷೆಯ ಸ್ಥಾನಮಾನ ಸಿಗಬೇಕು ಎಂಬ ಹೋರಾಟ ಈಗ ನಿರ್ಣಾಯಕ ಹಂತಕ್ಕೆ ತಲುಪಿದೆ. ಶಾಸಕರ ಈ ಹೇಳಿಕೆ ಮತ್ತು ಮುಂದಿನ ಹೋರಾಟದ ರೂಪುರೇಷೆಗಳ ಬಗ್ಗೆ ಹೆಚ್ಚಿನ ಮಾಹಿತಿ ಈ ವಿಡಿಯೋದಲ್ಲಿದೆ.