LIVE | ವೀರ ಬಾಲ ದಿವಸ್: ಬಿಜೆಪಿ ಕಚೇರಿಯಲ್ಲಿ ವಿಜಯೇಂದ್ರ, ರವಿಕುಮಾರ್ ಭಾಷಣ | BY Vijayendra | Veer Baal Diwas

26 Dec 2025 2:07 PM IST

ಬೆಂಗಳೂರಿನ ಬಿಜೆಪಿ ರಾಜ್ಯ ಕಾರ್ಯಾಲಯ 'ಜಗನ್ನಾಥ ಭವನ'ದಲ್ಲಿ ನಡೆದ 'ವೀರ ಬಾಲ ದಿವಸ್' ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಭಾಗವಹಿಸಿ ಮಾತನಾಡಿದರು. ಸಿಖ್ ಧರ್ಮಗುರು ಗುರು ಗೋಬಿಂದ್ ಸಿಂಗ್ ಅವರ ಪುತ್ರರಾದ (ಸಾಹಿಬ್‌ಜಾದೆಗಳು) ಜೋರಾವರ್ ಸಿಂಗ್ ಮತ್ತು ಫತೇಹ್ ಸಿಂಗ್ ಅವರ ಅದ್ವಿತೀಯ ತ್ಯಾಗ ಮತ್ತು ಬಲಿದಾನದ ನೆನಪಿಗಾಗಿ ಪ್ರತಿವರ್ಷ ಡಿಸೆಂಬರ್ 26 ರಂದು 'ವೀರ ಬಾಲ ದಿವಸ್' ಆಚರಿಸಲಾಗುತ್ತದೆ. ಈ ಅಂಗವಾಗಿ ಬಿಜೆಪಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ನಾಯಕರು ಸಾಹಿಬ್‌ಜಾದೆಗಳ ಶೌರ್ಯ ಮತ್ತು ದೇಶಭಕ್ತಿಯನ್ನು ಸ್ಮರಿಸಿದರು.