ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಶಾಸಕ ಕಿಡಿಕಾರಿದ್ದೇಕೆ? ಶರತ್ ಬಚ್ಚೇಗೌಡ ವರ್ತನೆ ನೋಡಿ
ಕರ್ನಾಟಕ ವಿಧಾನಸಭೆಯ ಜಂಟಿ ಅಧಿವೇಶನದಲ್ಲಿ ಇಂದು ಅನಿರೀಕ್ಷಿತ ಹೈಡ್ರಾಮಾ ನಡೆದಿದೆ. ರಾಜ್ಯಪಾಲರು ತಮ್ಮ ಪೂರ್ಣ ಭಾಷಣವನ್ನು ಓದದೆ ಸದನದಿಂದ ನಿರ್ಗಮಿಸುವ ವೇಳೆ, ಹೊಸಕೋಟೆ ಕಾಂಗ್ರೆಸ್ ಶಾಸಕ ಶರತ್ ಬಚ್ಚೇಗೌಡ ಅವರು ರಾಜ್ಯಪಾಲರ ಬಳಿಯೇ ತೆರಳಿ ಧಿಕ್ಕಾರದ ಘೋಷಣೆ ಕೂಗಿದ್ದಾರೆ. ಘಟನೆಯು ಸದನದಲ್ಲಿ ಭಾರೀ ಗದ್ದಲಕ್ಕೆ ಕಾರಣವಾಗಿದ್ದು, ರಾಜ್ಯಪಾಲರಿಗೆ ಅಗೌರವ ತೋರಿದ ಶರತ್ ಬಚ್ಚೇಗೌಡ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ನಾಯಕರು ಆಗ್ರಹಿಸಿದ್ದಾರೆ. ತಮ್ಮ ನಡೆಯನ್ನು ಸಮರ್ಥಿಸಿಕೊಂಡಿರುವ ಶಾಸಕರು 'ದ ಫೆಡರಲ್ ಕರ್ನಾಟಕ'ದ ಜೊತೆ ಮಾತನಾಡಿ, ತಾವು ಏಕೆ ಆ ರೀತಿ ನಡೆದುಕೊಂಡೆವು ಎಂಬ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.