"ಜೈಲಲ್ಲಿದ್ದ ಉಗ್ರನಿಗೆ ಮೊಬೈಲ್ ಕೊಟ್ಟಿದ್ದು ಯಾಕೆ?": ಕಾಂಗ್ರೆಸ್‌ಗೆ ಸಿ.ಟಿ. ರವಿ, ಛಲವಾದಿ ನಾರಾಯಣಸ್ವಾಮಿ ಖಡಕ್ ಪ್ರಶ್ನೆ
ದೆಹಲಿ ಸ್ಪೋಟದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಆರೋಪ-ಪ್ರತ್ಯಾರೋಪಗಳು ತಾರಕಕ್ಕೇರಿವೆ. ಇಂದು ಬಿಜೆಪಿ ಕಚೇರಿಯಲ್ಲಿ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಬಿಜೆಪಿ ನಾಯಕರಾದ ಸಿ.ಟಿ. ರವಿ ಮತ್ತು ಛಲವಾದಿ ನಾರಾಯಣಸ್ವಾಮಿ, ದೆಹಲಿ ಸ್ಪೋಟಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರ ಹೇಳಿಕೆಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. "ಜೈಲಿನಲ್ಲಿದ್ದ ಶಂಕಿತ ಉಗ್ರನಿಗೆ ಮೊಬೈಲ್ ಫೋನ್ ನೀಡಿ, ಹೊರಗಡೆ ಮಾತನಾಡಲು ಅವಕಾಶ ಮಾಡಿಕೊಟ್ಟಿದ್ದು ಯಾರು? ಇದು ಕಾಂಗ್ರೆಸ್ ಸರ್ಕಾರದ ವೈಫಲ್ಯವಲ್ಲವೇ?" ಎಂದು ಪ್ರಶ್ನಿಸಿದರು. ಈ ಪತ್ರಿಕಾಗೋಷ್ಠಿಯ ಸಂಪೂರ್ಣ ವಿವರಗಳಿಗಾಗಿ ವೀಡಿಯೋವನ್ನು ವೀಕ್ಷಿಸಿ.


