ಇಂದೋರ್ ದುರಂತ ಬೆಂಗಳೂರಲ್ಲೂ ಮರುಕಳಿಸುತ್ತಾ? ಲಿಂಗರಾಜಪುರದಲ್ಲಿ ನಲ್ಲಿ ಬಿಟ್ಟರೆ ಬರ್ತಿದೆ ವಿಷದ ನೀರು!
ಮಧ್ಯಪ್ರದೇಶದ ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು ಹಲವರು ಸಾವನ್ನಪ್ಪಿದ ಘಟನೆ ಮಾಸುವ ಮುನ್ನವೇ, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅಂತಹದ್ದೇ ಆತಂಕಕಾರಿ ಘಟನೆಯೊಂದು ಸಂಭವಿಸಿದೆ. ಬೆಂಗಳೂರಿನ ಲಿಂಗರಾಜಪುರದ ಕೆಎಸ್‌ಎಫ್‌ಸಿ (KSFC) ಲೇಔಟ್‌ನ 3ನೇ 'ಬಿ' ಮುಖ್ಯರಸ್ತೆಯ ಮನೆಗಳಿಗೆ ಪೂರೈಕೆಯಾಗುತ್ತಿರುವ ಕುಡಿಯುವ ನೀರು ಸಂಪೂರ್ಣ ಕಲುಷಿತಗೊಂಡಿದೆ. ಅದೃಷ್ಟವಶಾತ್ ಈವರೆಗೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲವಾದರೂ, ಈ ನೀರನ್ನು ಕುಡಿದ ಹಲವರು ಈಗಾಗಲೇ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ವಾಂತಿ, ಭೇದಿಯಂತಹ ಲಕ್ಷಣಗಳು ಕಾಣಿಸಿಕೊಂಡ ನಂತರವಷ್ಟೇ ಇದು ಕಲುಷಿತ ನೀರು ಎಂದು ನಿವಾಸಿಗಳಿಗೆ ತಿಳಿದುಬಂದಿದೆ. ಅಧಿಕಾರಿಗಳ ನಿರ್ಲಕ್ಷ್ಯವೇ ಈ ಸ್ಥಿತಿಗೆ ಕಾರಣ ಎಂದು ಸ್ಥಳೀಯರು ಕಿಡಿಕಾರುತ್ತಿದ್ದಾರೆ.