ಮತ್ತೆ ಟಿಪ್ಪು ಜಯಂತಿ ಆಚರಣೆ ಕಾಶೆಪ್ಪನವರ್ ಬೇಡಿಕೆಗೆ ಯತ್ನಾಳ್ ಗರಂ! : Yatnal vs Kashappanavar
ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಮತ್ತೆ ಟಿಪ್ಪು ಜಯಂತಿ ಆಚರಣೆಯ ವಿಷಯ ಮುನ್ನೆಲೆಗೆ ಬಂದಿದೆ. ಸ್ಥಗಿತಗೊಂಡಿರುವ ಟಿಪ್ಪು ಜಯಂತಿಯನ್ನು ಮತ್ತೆ ಆರಂಭಿಸುವಂತೆ ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶೆಪ್ಪನವರ ಅವರು ಸರ್ಕಾರದ ಮುಂದೆ ಬೇಡಿಕೆ ಇಟ್ಟಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು 'ದ ಫೆಡರಲ್ ಕರ್ನಾಟಕ'ದ ಜೊತೆ ಮಾತನಾಡುತ್ತಾ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.


