ಕೊಲ್ಕತ್ತಾ ವೈದ್ಯೆ ಅತ್ಯಾಚಾರ, ಕೊಲೆ | ಪ್ರಮುಖ ಆರೋಪಿ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಿದ ಸಿಬಿಐ
x

ಕೊಲ್ಕತ್ತಾ ವೈದ್ಯೆ ಅತ್ಯಾಚಾರ, ಕೊಲೆ | ಪ್ರಮುಖ ಆರೋಪಿ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಿದ ಸಿಬಿಐ

ಬೇಡಿಕೆಗಳ ಈಡೇರಿಕೆಗೆ ರಾಜ್ಯ ಸರ್ಕಾರದ ಗಡುವು ಮುಗಿದ ಬಳಿಕ ಕಿರಿಯ ವೈದ್ಯರು ಶನಿವಾರ ರಾತ್ರಿಯಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆಂಭಿಸಿದ್ದಾರೆ.


ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ತರಬೇತಿನಿರತ ವೈದ್ಯೆ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಪ್ರಮುಖ ಆರೋಪಿ ಸಂಜಯ್ ರಾಯ್ ವಿರುದ್ಧ ಸೋಮವಾರ ಸಿಬಿಐ ಇಲ್ಲಿನ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದೆ.

ಆಗಸ್ಟ್ 9 ರಂದು ಸಂತ್ರಸ್ತೆಯು ಸೆಮಿನಾರ್ ಕೊಠಡಿಯಲ್ಲಿ ಮಲಗಲು ಹೋದಾಗ ರಾಯ್ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ ಎಂದು ದೂರಲಾಗಿದೆ. ಆದರೆ, ವೈದ್ಯೆಯ ಮೇಲೆ ಸಾಮಾಹಿಕ ಅತ್ಯಾಚಾರ ನಡೆದಿರುವ ಬಗ್ಗೆ ಯಾವುದೇ ಉಲ್ಲೇಖ ಮಾಡಿಲ್ಲ. ಆರೋಪಿ ಸಂಜಯ್‌ ರಾಯ್‌, ಸ್ಥಳೀಯ ಪೊಲೀಸರೊಂದಿಗೆ ಸ್ವಯಂ ಸೇವಕನಾಗಿ ಕೆಲಸ ಮಾಡುತ್ತಿದ್ದ. ಆರೋಪಿ ಏಕಾಂಗಿಯಾಗಿ ಅಪರಾಧ ಎಸಗಿದ್ದ ಎಂದು ದೋಷಾರೋಪ ಪಟ್ಟಿಯಲ್ಲಿ ಅಧಿಕಾರಿಗಳು ಉಲ್ಲೇಖಿಸಿದ್ದಾರೆ.

ಉಪವಾಸ ನಿರಶನ ತೀವ್ರ

ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಂತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆಸ್ಪತ್ರೆಯ ಕಿರಿಯ ವೈದ್ಯರು ನಡೆಸುತ್ತಿರುವ ಅಮರಣಾಂತ ಉಪವಾಸ ಸತ್ಯಾಗ್ರಹವು ಉದ್ವಿಗ್ನ ಸ್ಥಿತಿ ನಿರ್ಮಿಸಿದೆ. ಉಪವಾಸ ನಿರಶನಕ್ಕೆ ಮತ್ತಷ್ಟು ವೈದ್ಯರು ಹಾಗೂ ಆಸ್ಪತ್ರೆ ಸಿಬ್ಬಂದಿ ಸೇರ್ಪಡೆಯಾಗುತ್ತಿದ್ದು, ಮಮತ ಬ್ಯಾನರ್ಜಿ ನೇತೃತ್ವದ ರಾಜ್ಯ ಸರ್ಕಾರಕ್ಕೆ ತಲೆ ನೋವಾಗಿ ಪರಿಣಮಿಸಿದೆ.

ಸೋಮವಾರ ಆರ್ಜಿ ಕರ್ ಆಸ್ಪತ್ರೆಯ ಕಿರಿಯ ವೈದ್ಯ ಅನಿಕೇತ್ ಮಹತೋ ಅವರು ಉಪವಾಸ ಸತ್ಯಾಗ್ರಹಕ್ಕೆ ಸೇರ್ಪಡೆಯಾದರು. ಯಾವುದೇ ಹಿರಿಯ-ಕಿರಿಯ ಎಂಬ ಬೇಧವಿಲ್ಲದೇ ಎಲ್ಲರೂ ಬಂದು ಹೋರಾಟದಲ್ಲಿ ಪಾಲ್ಗೊಳ್ಳುವ ಮೂಲಕ ಸತ್ಯಾಗ್ರಹಕ್ಕೆ ನೈತಿಕ ಬೆಂಬಲ ಸೂಚಿಸಬೇಕು ಎಂದು ಉಪವಾಸನಿರತ ವೈದ್ಯ ದೇಬಾಶಿಶ್ ಹಲ್ಡರ್ ಮನವಿ ಮಾಡಿದ್ದರು.

ಈ ಮಧ್ಯೆ, ಪ್ರತಿಭಟನಾಕಾರರು ಜೈವಿಕ ಶೌಚಾಲಯಗಳನ್ನು ನಿರ್ಮಿಸಿಕೊಳ್ಳಲು ಮುಂದಾದಾಗ ಪೊಲೀಸರು ತಡೆದಿದ್ದಾರೆ. ಇದರಿಂದ ಕುಪಿತರಾದ ವೈದ್ಯರು ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲು ನಿರ್ಧರಿಸಿದ್ದಾರೆ.

ವೈದ್ಯರ ಉಪವಾಸ ಸತ್ಯಾಗ್ರಹದಿಂದಾಗಿ ಆಸ್ಪತ್ರೆಯಲ್ಲಿ ಆರೋಗ್ಯ ಸೇವೆಗಳು ಭಾಗಶಃ ಸ್ಥಗಿತಗೊಂಡಿವೆ.

ತಮ್ಮ ಬೇಡಿಕೆಗಳ ಈಡೇರಿಕೆಗೆ ರಾಜ್ಯ ಸರ್ಕಾರ ನೀಡಿದ್ದ ಗಡುವು ಮುಗಿದ ಬಳಿಕ ಕಿರಿಯ ವೈದ್ಯರು ಶನಿವಾರ ರಾತ್ರಿಯಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದರು.

ಆಗಸ್ಟ್ 9 ರಂದು ಆರ್ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸಹ ವೈದ್ಯೆಯ ಮೇಲೆ ಅತ್ಯಾಚಾರ ನಡೆಸಿ, ಕೊಲೆ ಮಾಡಿದ ಘಟನೆ ಬಳಿಕ ಕಳೆದ ವೈದ್ಯರು 42 ದಿನಗಳ ಕಾಲ ಸೇವೆ ಸ್ಥಗಿತಗೊಳಿಸಿ ಮುಷ್ಕರ ನಡೆಸಿದ್ದರು. ಆಗ ಸರ್ಕಾರ ಮುಷ್ಕರನಿರತರ ಮನವೊಲಿಸಿದ ಪರಿಣಾಮ ಸೆ.21 ರಂದು ಮುಷ್ಕರ ಹಿಂಪಡೆದಿದ್ದರು.

ಇದಾದ ಒಂದು ವಾರದ ಬಳಿಕ ಸರ್ಕಾರಿ ಔಷಧೀಯ ಮಹಾವಿದ್ಯಾಲಯ ಮತ್ತು ಸಾಗೋರ್ ದತ್ತಾ ಆಸ್ಪತ್ರೆಯಲ್ಲಿ ರೋಗಿ ಕಡೆಯ ಕುಟುಂಬದವರು ವೈದ್ಯರ ಮೇಲೆ ದಾಳಿ ನಡೆಸಿದ ಘಟನೆ ನಡೆದಿತ್ತು. ಕೆಲಸದ ಸ್ಥಳದಲ್ಲಿ ವೈದ್ಯರು ಹಾಗೂ ಆಸ್ಪತ್ರೆ ಸಿಬ್ಬಂದಿಗೆ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿ ವೈದ್ಯರು ಅ.1ರಿಂದ ಮತ್ತೆ ಸೇವೆ ಸ್ಥಗಿತಗೊಳಿಸಿ ಮುಷ್ಕರ ಆರಂಭಿಸಿದ್ದರು.

Read More
Next Story