ಹಾವೇರಿ ಲೋಕಸಭಾ ಕ್ಷೇತ್ರ | ಕಾಂಗ್ರೆಸ್ ಸೇರಿದ ಬಿಜೆಪಿಯ ಹಿರಿಯ ನಾಯಕ ನೆಹರು ಓಲೇಕಾರ್
x
ಬಿಜೆಪಿಯ ಹಿರಿಯ ನಾಯಕ ನೆಹರು ಓಲೇಕಾರ್ ಕಾಂಗ್ರೆಸ್‌ ಸೇರ್ಪಡೆಗೊಂಡಿದ್ದಾರೆ.

ಹಾವೇರಿ ಲೋಕಸಭಾ ಕ್ಷೇತ್ರ | ಕಾಂಗ್ರೆಸ್ ಸೇರಿದ ಬಿಜೆಪಿಯ ಹಿರಿಯ ನಾಯಕ ನೆಹರು ಓಲೇಕಾರ್

Nehru Olekar is a senior BJP leader who joined the Congress


Click the Play button to hear this message in audio format

ಹಾವೇರಿ: ಹಾವೇರಿ ಮೀಸಲು ಕ್ಷೇತ್ರದ ಮಾಜಿ ಶಾಸಕ ಮತ್ತು ಎಸ್ಸಿ, ಎಸ್ಟಿ ಆಯೋಗದ ಅಧ್ಯಕ್ಷ ನೆಹರು ಓಲೇಕಾರ್ ಕಾಂಗ್ರೆಸ್ ಸೇರಿದ್ದಾರೆ.

ಕಲಬುರಗಿ ಜಿಲ್ಲೆಯ ಯಾದಗಿರಿಯಲ್ಲಿ ಬುಧವಾರ (ಮೇ 1) ಮಧ್ಯಾಹ್ನ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

2004, 2008, 2018ರಲ್ಲಿ ಬಿಜೆಪಿ ಪಕ್ಷದಿಂದ ಆಯ್ಕೆಯಾಗಿ ಸತತ ಮೂರು ಬಾರಿ ಕರ್ನಾಟಕ ರಾಜ್ಯ ಅನುಸೂಚಿತ ಜಾತಿ, ಅನುಸೂಚಿತ ಬುಡಕಟ್ಟುಗಳು ಆಯೋಗದ ಅಧ್ಯಕ್ಷರಾಗಿದ್ದ ನೆಹರು ಓಲೇಕಾರ್ ಅವರು 2023ರ ಚುನಾವಣೆಗೆ ಬಿಜೆಪಿ ಪಕ್ಷದ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಬೇಸರಗೊಂಡಿದ್ದರು. ತಮಗೆ ಟಿಕೆಟ್ ತಪ್ಪಲು ಸಿಎಂ ಬಸವರಾಜ ಬೊಮ್ಮಾಯಿ ಅವರೇ ನೇರ ಕಾರಣ ಎಂದು ಅವರ ವಿರುದ್ಧ ಅಸಮಾಧಾನಗೊಂಡು ಮಾಧ್ಯಮಗಳ ಮೂಲಕ ವಯಕ್ತಿಕವಾಗಿ ನಿಂದನೆ ಮಾಡಿದ ಘಟನೆಯೂ ನಡೆದಿತ್ತು.

ಮತದಾನಕ್ಕೆ ಇನ್ನು 5 ದಿನ ಬಾಕಿ ಇರುವಾಗ ಓಲೇಕಾರ ಕಾಂಗ್ರೆಸ್ ಸೇರ್ಪಡೆ ಆಗಿದ್ದರಿಂದ ಯಾರಿಗೆ ಲಾಭ. ಯಾರಿಗೆ ನಷ್ಟ ಎಂಬ ಬಗ್ಗೆ ಕ್ಷೇತ್ರದಲ್ಲಿ ಚರ್ಚೆ ಶುರುವಾಗಿದೆ. ಕೆಲ ದಿನಗಳ ಹಿಂದೆ ಬಿಜೆಪಿಯ ಚುನಾವಣಾ ಪ್ರಚಾರ ಸಭೆಗೆ ಬರಲಿದ್ದಾರೆ ಎಂಬ ವದಂತಿ ಹರಡಿತ್ತು. ಆಗ ಬಿಜೆಪಿಯ ಇಬ್ಬರು ಮಾಜಿ ಶಾಸಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು.

ಬ್ಯಾಡಗಿ ಕ್ಷೇತ್ರದಿಂದ ಒಂದು ಬಾರಿ, ಹಾವೇರಿ ಎಸ್ಪಿ ಮೀಸಲು ಕ್ಷೇತ್ರದಿಂದ ಎರಡು ಬಾರಿ ಗೆದ್ದಿರುವ ನೆಹರು ಓಲೇಕಾರ ಅವರಿಗೆ ಕಳೆದ ವಿಧಾನಸಭೆ ಟಿಕೆಟ್ ಕೈತಪ್ಪಿತ್ತು. ಜಿಲ್ಲೆಯವರೇ ಆದ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದಾಗ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಕಾರಣ ಓಲೇಕಾರ ಅವರಿಗೆ ಟಿಕೆಟ್ ಕೈತಪ್ಪಿತ್ತು ಎನ್ನಲಾಗಿದೆ.

'ಪಕ್ಷದ ಸಿದ್ಧಾಂತ ಒಪ್ಪಿಕೊಂಡು ಬಂದಿದ್ದಾರೆ. ರಾಜಕೀಯ ಸ್ಥಿತ್ಯಂತರ ಸಹಜ ಪ್ರಕ್ರಿಯೆ. ಸಣ್ಣಪುಟ್ಟ ಭಿನ್ನಾಭಿಪ್ರಾಯ ಬಂದರೂ ಸರಿಪಡಿಸಿಕೊಂಡು ಹೋಗುತ್ತೇವೆ. ನಮ್ಮ ಪಕ್ಷಕ್ಕೆ ಯಾರೇ ಬಂದರೂ ಸ್ವಾಗತಿಸುತ್ತೇವೆ' ಎಂದು ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಸಂಜೀವಕುಮಾರ ನೀರಲಗಿ ತಿಳಿಸಿದ್ದಾರೆ.

'ಬಸವರಾಜ ಬೊಮ್ಮಾಯಿ ಅವರ ಸ್ವಜನ ಪಕ್ಷಪಾತ, ಸರ್ವಾಧಿಕಾರಿ ಧೋರಣೆಯಿಂದ ಬೇಸತ್ತು ನಾನು ಕಾಂಗ್ರೆಸ್ ಸೇರಿದ್ದೇನೆ. ಪಕ್ಷದಲ್ಲಿ ನನ್ನನ್ನು ಕಡೆಗಣಸಿದ್ದಕ್ಕೆ ಬಿಜೆಪಿ ತ್ಯಜಿಸಿ ಕಾಂಗ್ರೆಸ್ ಸಿದ್ಧಾಂತ ಒಪ್ಪಿಕೊಂಡು ಹೋಗಿದ್ದೇನೆ' ಎಂದು ಮಾಜಿ ಶಾಸಕ ನೆಹರು ಓಲೇಕಾರ ತಿಳಿಸಿದ್ದಾರೆ.

Read More
Next Story