Loksabha Election 2024 | ಕಾಂಗ್ರೆಸ್ ಸೇರಿದ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ್ ಪುತ್ರ !
x
ಶಿವರಾಮ ಹೆಬ್ಬಾರ್ ಪುತ್ರ ವಿವೇಕ್ ಹೆಬ್ಬಾರ್‌ ಕಾಂಗ್ರೆಸ್‌ ಸೇರ್ಪಡೆ

Loksabha Election 2024 | ಕಾಂಗ್ರೆಸ್ ಸೇರಿದ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ್ ಪುತ್ರ !

ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ್ ಅವರು ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್ ನಾಯಕರೊಂದಿಗೆ ಕಾಣಿಸಿಕೊಳ್ಳುತ್ತಿದ್ದರು. ಇದು ಬಿಜೆಪಿ ನಾಯಕರ ಅಸಮಾಧಾನಕ್ಕೂ ಕಾರಣವಾಗಿತ್ತು. ಇದೀಗ ಚುನಾವಣಾ ಹೊತ್ತಿನಲ್ಲಿ ಅವರ ಪುತ್ರ ಅಧಿಕೃತವಾಗಿ ಕಾಂಗ್ರೆಸ್‌ ಸೇರಿದ್ದಾರೆ.


ಲೋಕಸಭೆ ಚುನಾವಣೆ ಸಮಯದಲ್ಲಿ ಬಿಜೆಪಿಗೆ ಮತ್ತೊಂದು ಆಘಾತ ಎದುರಾಗಿದೆ. ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ್ ಅವರ ಪುತ್ರ ವಿವೇಕ ಹೆಬ್ಬಾರ್ ಹಾಗೂ ಅವರ ಬೆಂಬಲಿಗರು ಬಿಜೆಪಿಗೆ ಗುಡ್ ಬೈ ಹೇಳಿದ್ದು, ಶಿರಸಿಯ ಬನವಾಸಿಯಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ್ ಅವರು ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್ ನಾಯಕರೊಂದಿಗೆ ಕಾಣಿಸಿಕೊಳ್ಳುತ್ತಿದ್ದರು. ಇದು ಬಿಜೆಪಿ ನಾಯಕರ ಅಸಮಾಧಾನಕ್ಕೂ ಕಾರಣವಾಗಿತ್ತು. ಅಲ್ಲದೇ ಬಿಜೆಪಿ ತೊರೆಯದೆ ತಟಸ್ಥ ನಿಲುವು ತೆಳೆದಿರುವುದಕ್ಕೂ ಸ್ಥಳೀಯ ಬಿಜೆಪಿ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದರು. ಇದೀಗ ಚುನಾವಣೆ ಸಂದರ್ಭದಲ್ಲಿ ಅವರ ಪುತ್ರ ವಿವೇಕ್ ಹೆಬ್ಬಾರ್ ಕಾಂಗ್ರೆಸ್‌ಗೆ ಸೇರಿದ್ದಾರೆ.

ಗುರುವಾರ ಶಿರಸಿ ತಾಲೂಕಿನ ಬನವಾಸಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ವಿವೇಕ ಹೆಬ್ಬಾರ್ ಕಾಂಗ್ರೆಸ್ ಸೇರಿದರು. ಕೆಪಿಸಿಸಿ ಉಪಾಧ್ಯಕ್ಷ ಐವಾನ್ ಡಿಸೋಜ ಮತ್ತು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷರಾದ ಸಾಯಿನಾಥ ಗಾಂವಕರ ಅವರು ಹೆಬ್ಬಾರ್ ಅವರಿಗೆ ಕಾಂಗ್ರೆಸ್ ಬಾವುಟ ನೀಡುವ ಮೂಲಕ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು. ಈ ಸಂದರ್ಭದಲ್ಲಿ ವಿವಿಧ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು ಮತ್ತು ಬಿಜೆಪಿ ಕಾರ್ಯಕರ್ತರು ಸಹ ಕಾಂಗ್ರೆಸ್ ಸೇರ್ಪಡೆಯಾದರು.

ಬಿಜೆಪಿಯಲ್ಲಿ ಆಕ್ರೋಶ

ಉತ್ತರ ಕನ್ನಡ ಜಿಲ್ಲೆಯ ಬಿಜೆಪಿ ನಾಯಕರು ಯಲ್ಲಾಪುರ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ್ ಅವರ ನಡೆಗೆ ಆಕ್ರೋಶಗೊಂಡಿದ್ದಾರೆ. ಹೆಬ್ಬಾರ್ ಅವರು ಬಿಜೆಪಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸುತ್ತಿಲ್ಲ. ಕಾಂಗ್ರೆಸ್ ನಾಯಕರೊಂದಿಗೆ ಕಾಣಿಸಿಕೊಳ್ಳುತ್ತಿದ್ದಾರೆ. ಪಕ್ಷವನ್ನೂ ಬಿಡುತ್ತಿಲ್ಲ ಎನ್ನುವ ಅಸಮಾಧಾನ ಕೇಳಿಬಂದಿದ್ದು, ಅವರ ರೆಬೆಲ್ ವರ್ತನೆ ಬಿಜೆಪಿಗೆ ಬಿಸಿತುಪ್ಪವಾಗಿದೆ.‌ ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಸಹ ಹೆಬ್ಬಾರ್ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಶಿವರಾಮ ಹೆಬ್ಬಾರ್‌ ಅವರ ಪುತ್ರನನ್ನು ಕಾಂಗ್ರೆಸ್‌ ಸೇರಿಸುವ ಉದ್ದೇಶದಿಂದಲೇ ಹೆಬ್ಬಾರ್‌ ಬಿಜೆಪಿಯಲ್ಲಿ ಸಕ್ರಿಯವಾಗಿಲ್ಲ ಎನ್ನುವ ಆರೋಪ ಕೇಳಿಬಂದಿತ್ತು. ಇದೀಗ ಅವರ ಪುತ್ರ ವಿವೇಕ್‌ ಹೆಬ್ಬಾರ್‌ ಕಾಂಗ್ರೆಸ್‌ ಸೇರಿದ್ದಾರೆ.

Read More
Next Story