ದಿಂಗಾಲೇಶ್ವರ ಸ್ವಾಮೀಜಿಗೆ ಕಾಂಗ್ರೆಸ್ ಬೆಂಬಲ? ಡಿ.ಕೆಶಿ ಹೇಳಿದ್ದೇನು?
x
ದಿಂಗಾಲೇಶ್ವರ ಸ್ವಾಮೀಜಿ

ದಿಂಗಾಲೇಶ್ವರ ಸ್ವಾಮೀಜಿಗೆ ಕಾಂಗ್ರೆಸ್ ಬೆಂಬಲ? ಡಿ.ಕೆಶಿ ಹೇಳಿದ್ದೇನು?

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಬಿಜೆಪಿ ಟಿಕೆಟ್ ನೀಡಿರುವುದಕ್ಕೆ ದಿಂಗಾಲೇಶ್ವರ ಸ್ವಾಮೀಜಿ ವಿರೋಧ ವ್ಯಕ್ತಪಡಿಸಿದ್ದರು. ಟಿಕೆಟ್ ಹಿಂಪಡೆಯುವಂತೆಯೂ ಬಿಜೆಪಿಗೆ ಸೂಚಿಸಿದ್ದರು. ಬಳಿಕ ಸ್ವತಃ ತಾವೇ ಚುನಾವಣಾ ಕಣಕ್ಕಿಳಿಯುವುದಾಗಿ ಅವರು ಘೋಷಿಸಿದ್ದಾರೆ.


ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ದಿಂಗಾಲೇಶ್ವರ ಸ್ವಾಮೀಜಿಗೆ ಟಿಕೆಟ್ ನೀಡುವ ವಿಚಾರದಲ್ಲಿ ಕಾಂಗ್ರೆಸ್ ತನ್ನ ನಿಲುವು ಸ್ಪಷ್ಟಪಡಿಸಿದೆ.

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಬಿಜೆಪಿ ಟಿಕೆಟ್ ನೀಡಿರುವುದಕ್ಕೆ ದಿಂಗಾಲೇಶ್ವರ ಸ್ವಾಮೀಜಿ ವಿರೋಧ ವ್ಯಕ್ತಪಡಿಸಿದ್ದರು. ಟಿಕೆಟ್ ಹಿಂಪಡೆಯುವಂತೆಯೂ ಬಿಜೆಪಿಗೆ ಸೂಚಿಸಿದ್ದರು. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಂಧಾನಕ್ಕೆ ಮುಂದಾಗಿದ್ದರಾದರೂ, ಸಂಧಾನ ಯಶಸ್ವಿಯಾಗಿರಲಿಲ್ಲ. ಇದರ ಬೆನ್ನಲ್ಲೇ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ದಿಂಗಾಲೇಶ್ವರ ಸ್ವಾಮೀಜಿ ಹೇಳಿದ್ದಾರೆ. ಈ ಬೆಳವಣಿಗೆಗಳ ನಡುವೆ ಕಾಂಗ್ರೆಸ್‌ನಿಂದ ದಿಂಗಾಲೇಶ್ವರ ಸ್ವಾಮೀಜಿಗೆ ಬೆಂಬಲ ಅಥವಾ ಟಿಕೆಟ್ ಸಿಗಲಿದೆಯೇ ಎನ್ನುವ ಕುತೂಹಲ ಮೂಡಿತ್ತು.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು, ನಾವು ದಿಂಗಾಲೇಶ್ವರ ಸ್ವಾಮೀಜಿ ಅವರನ್ನು ಬೆಂಬಲಿಸುವುದಾದರೆ, ನೇರವಾಗಿಯೇ ಬೆಂಬಲಿಸುತ್ತೇವೆ. ಗೌಪ್ಯವಾಗಿ ಏಕೆ ಬೆಂಬಲ ನೀಡಬೇಕು ಎಂದು ಪ್ರಶ್ನಿಸಿದ್ದಾರೆ.

ಇನ್ನು ಧಾರವಾಡ ಲೋಕಸಭಾ ಕ್ಷೇತ್ರದಿಂದ ದಿಂಗಾಲೇಶ್ವರ ಸ್ವಾಮೀಜಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದರೆ, ಅವರಿಗೆ ಬೆಂಬಲ ನೀಡುವ ಪ್ರಶ್ನೆಯೇ ಇಲ್ಲ. ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಈಗಾಗಲೇ ಕಾಂಗ್ರೆಸ್ ಅಭ್ಯರ್ಥಿ ಘೋಷಿಸಿ ಬಿ-ಫಾರಂ ಸಹ ನೀಡಲಾಗಿದೆ. ಸ್ವಾಮೀಜಿ ಮೊದಲೇ ಈ ತೀರ್ಮಾನ ತೆಗೆದುಕೊಂಡಿದ್ದರೆ, ಪರಿಸ್ಥಿತಿಯೇ ಭಿನ್ನವಾಗಿರುತ್ತಿತ್ತು. ಕಾಂಗ್ರೆಸ್ ಅಭ್ಯರ್ಥಿ ಈಗಾಗಲೇ ಕೆಲಸ ಮಾಡುತ್ತಿದ್ದಾರೆ. ಜಾತ್ಯಾತೀತ ತತ್ವಗಳ ಉಳಿವಿಗಾಗಿ ಶ್ರಮಿಸುತ್ತಿರುವ ಸ್ವಾಮೀಜಿಯ ಬಗ್ಗೆ ನಮಗೆ ಅಪಾರವಾದ ಗೌರವವಿದೆ ಎಂದು ಹೇಳಿದ್ದಾರೆ.

Read More
Next Story