Loksabha Election 2024 | ಏ.28ಕ್ಕೆ ಮತ್ತೆ ಕರ್ನಾಟಕಕ್ಕೆ ಮೋದಿ ಆಗಮನ
x

Loksabha Election 2024 | ಏ.28ಕ್ಕೆ ಮತ್ತೆ ಕರ್ನಾಟಕಕ್ಕೆ ಮೋದಿ ಆಗಮನ


ರಾಜ್ಯದಲ್ಲಿ ನಡೆಯಲಿರುವ ಎರಡನೇ ಹಂತದ ಚುನಾವಣೆಯ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೆ ಕರ್ನಾಟಕಕ್ಕೆ ಬರುತ್ತಿದ್ದಾರೆ. ಏ.28 ರಂದು ದಾವಣಗೆರೆ ಜಿಲ್ಲೆಗೆ ಆಗಮಿಸಲಿದ್ದು, ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಹಾಗೂ ಹಾವೇರಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರ ಪರ ಪ್ರಚಾರ ನಡೆಸಲಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾಹಿತಿ ಹಂಚಿಕೊಂಡ ಸಂಸದ ಜಿ.ಎಂ.ಸಿದ್ದೇಶ್ವರ ಅವರು, ʻʻನರೇಂದ್ರ ಮೋದಿ ಅವರು 5ನೇ ಬಾರಿಗೆ ದಾವಣಗೆರೆಗೆ ಆಗಮಿಸುತ್ತಿದ್ದು,ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ರಾಜ್ಯ ನಾಯಕರು ಪಾಲ್ಗೊಳ್ಳಲಿದ್ದಾರೆ. ಮೋದಿ ಆಗಮನ ಕಾರ್ಯಕರ್ತರಲ್ಲಿ ಹೊಸ ಹುರುಪು ಮೂಡಿಸಿದ್ದು, ಗಾಯತ್ರಿ ಸಿದ್ದೇಶ್ವರ ಅವರನ್ನು ಹೆಚ್ಚಿನ ಅಂತರದಿಂದ ಗೆಲ್ಲಿಸುವ ಸಂಕಲ್ಪ ಮಾಡಿದ್ದೇವೆʼʼ ಎಂದು ತಿಳಿಸಿದ್ದಾರೆ.

ಮೋದಿ ಆಗಮನದ ನಿಮಿತ್ತ ಬುಧವಾರ ದಾವಣಗೆರೆಯಲ್ಲಿನ ಹೈಸ್ಕೂಲ್ ಮೈದಾನದಲ್ಲಿ ಹಂದರಗಂಬ ಪೂಜೆ ನೆರವೇರಿಸಲಾಯಿತು. ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್.ರಾಜಶೇಖರ್, ಮುಖಂಡರಾದ ಎ.ಎಚ್‌.ಶಿವಯೋಗಿ ಸ್ವಾಮಿ, ಯಶವಂತ ರಾವ್‌ ಜಾಧವ್, ಕೊಳೇನಹಳ್ಳಿ ಸತೀಶ್, ವೈ. ಮಲ್ಲೇಶ್, ಜಿ.ಎಸ್. ಅನಿತ್ ಕುಮಾರ್ ಇತರರು ಇದ್ದರು.

Read More
Next Story