Lok Sabha Elections: 2ನೇ ಹಂತದ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ
x
ಎರಡನೇ ಹಂತದ ಲೋಕಸಭೆ ಚುನಾವಣೆ

Lok Sabha Elections: 2ನೇ ಹಂತದ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ

2ನೇ ಹಂತದಲ್ಲಿ ದಾವಣಗೆರೆ, ಶಿವಮೊಗ್ಗ, ರಾಯಚೂರು, ಬಳ್ಳಾರಿ, ಕೊಪ್ಪಳ, ಬೀದರ್, ವಿಜಯಪುರ, ಬಾಗಲಕೋಟೆ, ಕಲಬುರಗಿ, ಧಾರವಾಡ, ಬೆಳಗಾವಿ, ಚಿಕ್ಕೋಡಿ, ಹಾವೇರಿ, ಉತ್ತರ ಕನ್ನಡ ಲೋಕಸಭಾ ಕ್ಷೇತ್ರಗಳಲ್ಲಿ ಮೇ 7ರಂದು ಲೋಕಸಭೆ ಚುನಾವಣೆ ನಡೆಯಲಿದೆ.

ಕರ್ನಾಟಕದಲ್ಲಿ ಎರಡನೇ ಹಂತದ ಲೋಕಸಭೆ ಚುನಾವಣೆಗೆ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದ್ದು, ಎರಡನೇ ಹಂತದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರದಿಂದ (ಏ.12ರಿಂದ) ನಾಮಪತ್ರ ಸಲ್ಲಿಕೆ ಪ್ರಾರಂಭವಾಗಲಿದೆ.

ಎರಡನೇ ಹಂತದಲ್ಲಿ ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ ಹಾಗೂ ಮಧ್ಯ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. ಕರ್ನಾಟಕದಲ್ಲಿ ಎರಡು ಹಂತದಲ್ಲಿ ಲೋಕಸಭೆ ಚುನಾವಣೆ ನಡೆಯುತ್ತಿದೆ. ಮೊದಲನೇ ಹಂತದ 14 ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ, ಹಿಂಪಡೆಯುವುದು ಸೇರಿದಂತೆ ನಾಮಪತ್ರ ಪರಿಶೀಲನೆ ಪ್ರಕ್ರಿಯೆಗಳು ಮುಕ್ತಾಯವಾಗಿವೆ.

ಎರಡನೇ ಹಂತದಲ್ಲಿ ಚುನಾವಣೆ ನಡೆಯುವ ಕ್ಷೇತ್ರಗಳು

2ನೇ ಹಂತದಲ್ಲಿ ದಾವಣಗೆರೆ, ಶಿವಮೊಗ್ಗ, ರಾಯಚೂರು, ಬಳ್ಳಾರಿ, ಕೊಪ್ಪಳ, ಬೀದರ್, ವಿಜಯಪುರ, ಬಾಗಲಕೋಟೆ, ಕಲಬುರಗಿ, ಧಾರವಾಡ, ಬೆಳಗಾವಿ, ಚಿಕ್ಕೋಡಿ, ಹಾವೇರಿ, ಉತ್ತರ ಕನ್ನಡ ಲೋಕಸಭಾ ಕ್ಷೇತ್ರಗಳಲ್ಲಿ ಮೇ 7ರಂದು ಲೋಕಸಭೆ ಚುನಾವಣೆ ನಡೆಯಲಿದೆ.

ಉಪ ಚುನಾವಣೆಗೂ ನಾಮಪತ್ರ ಸಲ್ಲಿಕೆ

14 ಲೋಕಸಭಾ ಕ್ಷೇತ್ರಗಳೊಂದಿಗೆ ಸುರಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೂ ನಾಳೆಯಿಂದ ನಾಮಪತ್ರ ಸಲ್ಲಿಕೆ ಪ್ರಾರಂಭವಾಗಲಿದೆ. ಶಾಸಕ ರಾಜ ವೆಂಕಟಪ್ಪ ನಾಯ್ಕ್ ಅವರ ನಿಧನದಿಂದ ಈ ಕ್ಷೇತ್ರದಲ್ಲಿ ಉಪ ಚುನಾವಣೆ ನಡೆಯುತ್ತಿದೆ.

Read More
Next Story