Loksabha Election 2024 | ಕಾಂಗ್ರೆಸ್ 3ನೇ ಪಟ್ಟಿ ಬಿಡುಗಡೆ; ಕೋಲಾರವೊಂದೇ ಬಾಕಿ
x

Loksabha Election 2024 | ಕಾಂಗ್ರೆಸ್ 3ನೇ ಪಟ್ಟಿ ಬಿಡುಗಡೆ; ಕೋಲಾರವೊಂದೇ ಬಾಕಿ


ಕಾಂಗ್ರೆಸ್ ತನ್ನ ಅಭ್ಯರ್ಥಿಗಳ 3ನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. 28 ಕ್ಷೇತ್ರಗಳ ಪೈಕಿ 24 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಈಗಾಗಲೇ ಘೋಷಿಸಿತ್ತು. ಇದೀಗ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸಿದ್ದು, ಒಂದು ಕ್ಷೇತ್ರಕ್ಕೆ ಮಾತ್ರ ಇನ್ನೂ ಅಭ್ಯರ್ಥಿ ಆಯ್ಕೆ ಮಾಡಿಲ್ಲ.

ಚಿಕ್ಕಬಳ್ಳಾಪುರ, ಬಳ್ಳಾರಿ ಹಾಗೂ ಚಾಮರಾಜನಗರ ಲೋಕಸಭಾ ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರನ್ನು 3ನೇ ಪಟ್ಟಿಯಲ್ಲಿ ಘೋಷಿಸಲಾಗಿದೆ. ಆದರೆ ಕೋಲಾರ ಕ್ಷೇತ್ರದ ಅಭ್ಯರ್ಥಿ ಯಾರು ಎನ್ನುವುದು ಇನ್ನೂ ನಿಗೂಢವಾಗಿಯೇ ಇದೆ.

ಸಚಿವ ಕೆಎಚ್ ಮುನಿಯಪ್ಪ ಅಳಿಯ ಚಿಕ್ಕಪೆದ್ದಣ್ಣ ಅವರಿಗೆ ಟಿಕೆಟ್ ನೀಡೋದಕ್ಕೆ ಹೈಕಮಾಂಡ್ ನಿರ್ಧರಿಸಿತ್ತು. ಆದರೆ ಇದಕ್ಕೆ ರಮೇಶ್ ಕುಮಾರ್ ಬಣದ ಶಾಸಕರು, ನಾಯಕರು, ಕಾರ್ಯಕರ್ತರು ವಿರೋಧಿಸಿದ್ದಾರೆ. ಹೀಗಾಗಿ ಎರಡೂ ಬಣದ ಅಭ್ಯರ್ಥಿ ಬಿಟ್ಟು, ಬೇರೆ ಅಭ್ಯರ್ಥಿ ನಿಲ್ಲಿಸುವ ಬಗ್ಗೆಯೂ ಮಾತುಗಳು ಕೇಳಿ ಬಂದಿದ್ದವು. ಇದೀಗ ಕಾಂಗ್ರೆಸ್ ತನ್ನ 3ನೇ ಪಟ್ಟಿಯಲ್ಲೂ ಕೋಲಾರ ಕ್ಷೇತ್ರಕ್ಕೆ ಅಭ್ಯರ್ಥಿ ಹೆಸರು ಘೋಷಿಸದೇ, ಇನ್ನಷ್ಟು ಕುತೂಹಲ ಮೂಡಿಸಿದೆ.

ಚಿಕ್ಕಬಳ್ಳಾಪುರದಿಂದ ರಕ್ಷಾರಾಮಯ್ಯ ಅವರಿಗೆ ಟಿಕೆಟ್ ಘೋಷಿಸಲಾಗಿದೆ. ಇನ್ನು ಬಳ್ಳಾರಿಯಿಂದ ಹಾಲಿ ಸಂಸದ ಇ. ತುಕಾರಾಂ ಅವರನ್ನು ಕಣಕ್ಕೆ ಇಳಿಸಲು ನಿರ್ಧರಿಸಲಾಗಿದೆ. ಇನ್ನು ಚಾಮರಾಜನಗರದಿಂದ ಎಚ್.ಸಿ. ಮಹದೇವಪ್ಪನವರ ಪುತ್ರ ಸುನೀಲ್ ಬೋಸ್ಗೆ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ.




Read More
Next Story