Loksabha Election 2024 | ನಾಮಪತ್ರ ಪರಿಶೀಲನೆ ಮುಕ್ತಾಯ : 74 ನಾಮಪತ್ರ ತಿರಸ್ಕೃತ!
x
ನಾಮಪತ್ರ ತಿರಸ್ಕೃತ

Loksabha Election 2024 | ನಾಮಪತ್ರ ಪರಿಶೀಲನೆ ಮುಕ್ತಾಯ : 74 ನಾಮಪತ್ರ ತಿರಸ್ಕೃತ!


ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ನಡೆಯಲಿರುವ 14 ಲೋಕಸಭಾ ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ ಅವಧಿ ಮುಕ್ತಾಯವಾಗಿದ್ದು, ಎಲ್ಲಾ ಕ್ಷೇತ್ರಗಳ ನಾಮಪತ್ರ ಪರಿಶೀಲನೆ ಮುಗಿದಿದೆ. ಮೊದಲ ಹಂತದಲ್ಲಿ ಸಲ್ಲಿಕೆಯಾಗಿರುವ ನಾಮಪತ್ರಗಳಲ್ಲಿ 74 ನಾಮಪತ್ರಗಳು ತಿರಸ್ಕೃತವಾಗಿವೆ.

14 ಲೋಕಸಭೆ ಕ್ಷೇತ್ರಗಳಲ್ಲಿ 358 ಅಭ್ಯರ್ಥಿಗಳಿಂದ ಒಟ್ಟು 492 ನಾಮಪತ್ರಗಳು (ಒಬ್ಬ ಅಭ್ಯರ್ಥಿ ನಾಲ್ಕು ನಾಮಪತ್ರಗಳನ್ನು ಸಲ್ಲಿಸಲು ಅವಕಾಶ ಇದೆ) ಸಲ್ಲಿಕೆಯಾಗಿದ್ದು, 419 ನಾಮಪತ್ರಗಳು ಸ್ವೀಕೃತವಾಗಿವೆ.


ನಿಖರವಾಗಿ ನಾಮಪತ್ರ ಸಲ್ಲಿಸಿದ 300 ಅಭ್ಯರ್ಥಿಗಳು

ಕರ್ನಾಟಕದ 14 ಲೋಕಸಭಾ ಕ್ಷೇತ್ರದಿಂದ ಒಟ್ಟು 358 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಆದರೆ, ಇವರಲ್ಲಿ 300 ಅಭ್ಯರ್ಥಿಗಳು ಮಾತ್ರ ನಿಖರವಾಗಿ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಯಲ್ಲಿನ ಲೋಪದಿಂದಾಗಿ 58 ಜನ ಅಭ್ಯರ್ಥಿಗಳು ಸ್ಪರ್ಧಿಸುವ ಅವಕಾಶ ಕಳೆದುಕೊಂಡಿದ್ದಾರೆ. ಕೆಲವೊಮ್ಮೆ ನಾಮಪತ್ರ ತಿರಸ್ಕೃತವಾಗುವ ಸಾಧ್ಯತೆ ಇರುವುದರಿಂದ ಕೆಲವು ಅಭ್ಯರ್ಥಿಗಳು ಒಂದಕ್ಕಿಂತ ಹೆಚ್ಚು ನಾಮಪತ್ರಗಳನ್ನು ಸಲ್ಲಿಸುತ್ತಾರೆ. ಇದೇ ಕಾರಣಕ್ಕೆ 14 ಲೋಕಸಭಾ ಕ್ಷೇತ್ರದಲ್ಲಿ 358 ಅಭ್ಯರ್ಥಿಗಳಿಂದ 492 ನಾಮಪತ್ರ ಸಲ್ಲಿಕೆಯಾಗಿತ್ತು. ಲೋಕಸಭೆ ಚುನಾವಣೆಗೆ ಸಲ್ಲಿಕೆಯಾಗಿರುವ ನಾಮಪತ್ರಗಳನ್ನು ಹಿಂಪಡೆಯಲು ಏ. 8 ಕೊನೆಯ ದಿನವಾಗಿದೆ.

Read More
Next Story