ಕಾಂಗ್ರೆಸ್‌ನತ್ತ ಮುಖ ಮಾಡಿದ ಶ್ರೀನಿವಾಸ್‌ ಪ್ರಸಾದ್‌ ಸೋದರ
x

ಕಾಂಗ್ರೆಸ್‌ನತ್ತ ಮುಖ ಮಾಡಿದ ಶ್ರೀನಿವಾಸ್‌ ಪ್ರಸಾದ್‌ ಸೋದರ


ಲೋಕಸಭೆ ಚುನಾವಣೆಯ ಹೊಸ್ತಿಲಲ್ಲಿ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯಲ್ಲಿ ʼಪಕ್ಷಾಂತರʼಗ ಪರ್ವದ ಭರಾಟೆ ಜೋರಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಒಂದು ಕಾಲದ ಗೆಳೆಯ ಮತ್ತು ಸಹವರ್ತಿ ಹಾಗೂ ಮುನಿಸಿಕೊಂಡು ಬಿಜೆಪಿ ಸೇರಿ ಗೆಳೆಯನ ವಿರುದ್ಧವೇ ತೊಡೆತಟ್ಟಿದ್ದ ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ಅವರು ಈ ಬಾರಿ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಈಗ ಶ್ರೀನಿವಾಸ್‌ ಪ್ರಸಾದ್‌ ಅವರ ಬೆಂಬಲಿಗರು ಒಬ್ಬೊಬ್ಬರಾಗಿ ಕಾಂಗ್ರೆಸ್‌ ಪಾಳಯ ಸೇರುತ್ತಿದ್ದಾರೆ.

ಸಿದ್ದರಾಮಯ್ಯನವರ ಸೂಚನೆ ಮೇರೆಗೆ ಮೊನ್ನೆ ಅಷ್ಟೇ ಸಚಿವರಾದ ಎಚ್​ಸಿ ಮಹದೇವಪ್ಪ, ವೆಂಕಟೇಶ್​ ಸೇರಿದಂತೆ ಚಾಮರಾನಗರ ಮತ್ತು ಮೈಸೂರು ಕಾಂಗ್ರೆಸ್ ನಾಯಕರು ಸೇರಿಸಕೊಂಡು ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ಅವರನ್ನು ಭೇಟಿ ಮಾಡಿದ್ದರು. ಅಲ್ಲದೇ ಕಾಂಗ್ರೆಸ್​ಗೆ ಬೆಂಬಲಿಸುವಂತೆ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ ಶ್ರೀನಿವಾಸ್ ಪ್ರಸಾದ್ ಅಳಿಯ ಧೀರಜ್‌ ಪ್ರಸಾದ್ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಅಲ್ಲದೇ ಇದೀಗ ಶ್ರೀನಿವಾಸ್ ಪ್ರಸಾದ್ ಅವರ ಸಹೋದರ ವಿ.ರಾಮಸ್ವಾಮಿ ಸಹ ಕಾಂಗ್ರೆಸ್ ಸೇರ್ಪಡೆಯಾದರು. ಹೌದು… ಮೈಸೂರಿನಲ್ಲಿ ಇಂದು (ಏಪ್ರಿಲ್ 02) ವಿ.ರಾಮಸ್ವಾಮಿ ಅವರು ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು. ಇದರಿಂದ ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಮರ್ಮಾಘಾತವಾಗಿದೆ.

ಮೈಸೂರು ಕ್ಷೇತ್ರವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಸಿಎಂ ಸಿದ್ದರಾಮಯ್ಯ, ಮೂರು ದಿನ ಠಿಕಾಣಿ ಹೂಡಿ, ಆಪರೇಷನ್ ಅಸ್ತ್ರ ನಡೆಸಿದ್ದಾರೆ. ಮೈಸೂರು ಜಿಲ್ಲೆಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರವಾಸ ಮುಂದುವರಿದಿದೆ. ಮೈಸೂರು-ಕೊಡಗು, ಚಾಮರಾಜನಗರ ಕ್ಷೇತ್ರದ ಮೇಲೆ ಕಣ್ಣಿಟ್ಟಿರುವ ಸಿಎಂ ಭಾರಿ ಕಸರತ್ತು ನಡೆಸುತ್ತಿದ್ದಾರೆ. ನಾನಾ ಕಡೆಗಳಿಗೆ ಭೇಟಿ ನೀಡಿ ಸಭೆ ಹಾಗೂ ಚುನಾವಣಾ ಪ್ರಚಾರ ಕೈಗೊಳ್ಳುತ್ತಿದ್ದಾರೆ.

ಇಂದು ಮೈಸೂರಿನ ಚಾಮರಾಜ ಹಾಗೂ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ. ಚಾಮರಾಜ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಹಿರಂಗ ಪ್ರಚಾರ ಸಭೆಯಲ್ಲಿ ಭಾಗಿಯಾಗಿ ನಂತರ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಲಿದೆ. ಮತ್ತೊಂದೆಡೆ ಚಾಮುಂಡೇಶ್ವರಿ ಕ್ಷೇತ್ರದ ಮುಖಂಡರ ಸಭೆ ನಡೆಸಲಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಲೀಡ್ ಕೊಡಲೇಬೇಕು ಎಂದು ಈಗಾಗಲೇ ಸಿಎಂ ಮುಖಂಡರಿಗೆ ಸೂಚನೆ ನೀಡಿದ್ದಾರೆ.

Read More
Next Story