ಕೆಲವೇ ಕ್ಷಣಗಳಲ್ಲಿ ಬಿಜೆಪಿ ಸೇರಲಿರುವ ಮಂಡ್ಯ ಸಂಸದೆ ಸುಮಲತಾ ಅಂಬರೀಶ್!
x
ಸುಮಲತಾ ಅಂಬರೀಶ್‌

ಕೆಲವೇ ಕ್ಷಣಗಳಲ್ಲಿ ಬಿಜೆಪಿ ಸೇರಲಿರುವ ಮಂಡ್ಯ ಸಂಸದೆ ಸುಮಲತಾ ಅಂಬರೀಶ್!

ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಬಿಜೆಪಿ ಸೇರ್ಪಡೆಯಾಗುವುದಾಗಿ ಘೋಷಿಸಿದ್ದು, ಇಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆ ಆಗಲಿದ್ದಾರೆ. ಅವರ ಮುಂದಿನ ನಿರ್ಧಾರದ ಬಗ್ಗೆ ಕುತೂಹಲವಿತ್ತು.


ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಬಿಜೆಪಿ ಸೇರ್ಪಡೆಯಾಗುವುದಾಗಿ ಘೋಷಿಸಿದ್ದು, ಇಂದು(ಏ.5 ) ಅಧಿಕೃತವಾಗಿ ಬಿಜೆಪಿ ಸೇರ್ಪಡೆ ಆಗಲಿದ್ದಾರೆ.

ಸುಮತಲಾ ಅಂಬರೀಶ್ ಅವರು ಸ್ವತಂತ್ರ್ಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲಿದ್ದಾರೆಯೇ ಅಥವಾ ಕಾಂಗ್ರೆಸ್ ಸೇರಲಿದ್ದಾರೆ ಎನ್ನುವ ಕುತೂಹಲ ಮೂಡಿತ್ತು. ಆದರೆ, ಇದಕ್ಕೆ ಸುಮಲತಾ ಅಂಬರೀಶ್ ಅವರು ಬುಧವಾರ ತೆರೆ ಎಳೆದಿದ್ದು, ಮಂಡ್ಯದಲ್ಲಿ ನಡೆದ ಬೆಂಬಲಿಗರ ಸಭೆಯಲ್ಲಿ ಬಿಜೆಪಿ ಸೇರ್ಪಡೆಯಾಗುವುದಾಗಿ ಘೋಷಿಸಿದ್ದರು.

ಬಿಜೆಪಿ ಸೇರ್ಪಡೆ ಆಗುವುದರ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಅವರು ಟ್ವೀಟ್ ಮಾಡಿದ್ದು, ಮಂಡ್ಯ ಕ್ಷೇತ್ರದ ಅಭಿವೃದ್ಧಿಯೇ ನನ್ನ ಮೂಲಮಂತ್ರವಾಗಿದೆ. ನಮ್ಮೆಲ್ಲರ ನೆಚ್ಚಿನ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗಬೇಕು ಎನ್ನುವ ಆಶಯದೊಂದಿಗೆ ಬಿಜೆಪಿ ಬೆಂಬಲಿಸುವುದಾಗಿ ಘೋಷಿಸಿದ್ದೇನೆ.

ಶುಕ್ರವಾರ ಬೆಳಿಗ್ಗೆ 11.30ಕ್ಕೆ ಬಿಜೆಪಿ ನಾಯಕರ ಸಮ್ಮುಖದಲ್ಲಿ ಬಿಜೆಪಿ ಸೇರುತ್ತಿದ್ದೇನೆ ಎಂದು ತಿಳಿಸಿದ್ದಾರೆ. ನಮ್ಮ ಕರುನಾಡಿನ ಮಂಡ್ಯ ಸ್ವಾಭಿಮಾನಿ ಬಂಧುಗಳು, ಡಾ.ಅಂಬರೀಶ್ ಅವರ ಅಭಿಮಾನಿಗಳು ಮತ್ತು ಎಲ್ಲರ ಆಶೀರ್ವಾದ ಸದಾ ನನ್ನ ಮೇಲೆ ಇರಲಿ ಎಂದು ಅವರು ಮನವಿ ಮಾಡಿದ್ದಾರೆ.

Read More
Next Story