ಮೋದಿ ಮತ್ತೆ ಅಧಿಕಾರಕ್ಕೆ ಬಂದರೆ ಸರ್ವಾಧಿಕಾರಿಯಾಗುತ್ತಾರೆ: ಖರ್ಗೆ
x

ಮೋದಿ ಮತ್ತೆ ಅಧಿಕಾರಕ್ಕೆ ಬಂದರೆ ಸರ್ವಾಧಿಕಾರಿಯಾಗುತ್ತಾರೆ: ಖರ್ಗೆ

ನರೇಂದ್ರ ಮೋದಿ ಅಧಿಕಾರಕ್ಕೆ ಬಂದರೆ ದೇಶದಲ್ಲಿ ಸರ್ವಾಧಿಕಾರ ಬರುತ್ತದೆ ಆಗ ಚುನಾವಣೆಯೇ ನಡೆಯುವುದಿಲ್ಲ ಎಂದು ಮಲ್ಲಿಕಾರ್ಜುನ್‌ ಖರ್ಗೆ ಹೇಳಿದ್ದಾರೆ.


ಪ್ರಧಾನಿ ನರೇಂದ್ರ ಮೋದಿ ಮತ್ತೆ ಅಧಿಕಾರಕ್ಕೆ ಬಂದರೆ ಸರ್ವಾಧಿಕಾರಿ ಆಗುತ್ತಾರೆ. ಮುಂದೆ ಚುನಾವಣೆಯೇ ನಡೆಯುವುದಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಶನಿವಾರ ಅಡ್ಯಾರ್‌ ನ ಸಹ್ಯಾದ್ರಿ ಕಾಲೇಜು ಮೈದಾನದಲ್ಲಿ ನಡೆದ ರಾಜ್ಯ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಸಂವಿಧಾನ, ಪ್ರಜಾಪ್ರಭುತ್ವ ಉಳಿಯ ಬೇಕಾದರೆ ಕಾಂಗ್ರೆಸ್ ಗೆಲ್ಲಬೇಕು. ಅದಕ್ಕೆ ಪಕ್ಷದ ನಾಯಕರು, ಕಾರ್ಯ ಕರ್ತರು ಶ್ರಮಿಸಬೇಕು ಎಂದರು.

ದೇಶದಲ್ಲಿ ಈಗಾಗಲೇ ನ್ಯಾಯಾಂಗ, ಇಡಿ, ಐಟಿ ಸೇರಿ ಎಲ್ಲ ಸ್ವಾಯತ್ತ ಸಂಸ್ಥೆಗಳನ್ನೂ ನಿಯಂತ್ರಣ ಮಾಡಲಾಗಿದೆ. ಮತ್ತೆ ಅಧಿಕಾರ ಸಿಕ್ಕರೆ ಸರ್ವಾಧಿಕಾರಿ ಆಗುತ್ತಾರೆ. ಇಂಥವರಿಗೆ ಅಧಿಕಾರ ನೀಡಬೇಡಿ. ನಮ್ಮನ್ನು ಪೂರ್ತಿ ಮುಗಿಸಲು ಪಕ್ಷದ ಎಲ್ಲ ಅಕೌಂಟ್ ಸೀಝ್ ಮಾಡಿದರು. ಆದರೆ ಬಿಜೆಪಿ 6 ಸಾವಿರ ಕೋಟಿ ರೂ. ಎಲೆಕ್ಷನ್ ಬಾಂಡ್ ನ್ನು ಕಾಳಧನಿಕರಿಂದ ತೆಗೆದುಕೊಂಡಿದ್ದಾರೆ. ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುವ ಕೆಲಸ ಆಗಿದ್ದು, ರಾಜ್ಯದ ಮುಖ್ಯಮಂತ್ರಿ ದಿಲ್ಲಿಯಲ್ಲಿ ಸತ್ಯಾಗ್ರಹ ಮಾಡಬೇಕಾಯಿತು ಎಂದು ಅವರು ಹೇಳಿದರು.

ಧರ್ಮದ ಹೆಸರಲ್ಲಿ ರಾಜಕೀಯ ಮಾಡುವುದರ ಜೊತೆಗೆ ಬಡವರು ದಲಿತರನ್ನು ತುಳಿಯುವ ಗುರಿ ಇಟ್ಟುಕೊಂಡಿದ್ದಾರೆ. ಇದಕ್ಕೆ ಜನರು ತಕ್ಕ ಉತ್ತರ ನೀಡಬೇಕು. ಕಾರ್ಯಕರ್ತರು ಕಾಂಗ್ರೆಸ್ ನೀಡಿದ, ಮಾಡಿದ ಸಾಧನೆಗಳನ್ನೂ ಜನರಿಗೆ ತಿಳಿಸಬೇಕು. ರಾಜ್ಯದಲ್ಲಿ ಗ್ಯಾರಂಟಿ ಯೋಜನೆ, ಬಜೆಟ್ ನೋಡಿದ ಮೇಲೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕನಿಷ್ಠ 20 ಸ್ಥಾನ ಗೆಲ್ಲಲಿದ್ದೇವೆ. ಅದಕ್ಕೆ ತಳ ಹಂತದ ಕಾರ್ಯಕರ್ತರು ಹೊಣೆಗಾರಿಕೆಬೇಕು. ಮಂಗಳೂರು, ಉಡುಪಿ, ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ ಮಾಡಿ ಸೀಟು ಗೆಲ್ಲಬೇಕು ಎಂದು ನೆರೆದಿದ್ದ ನಾಯಕರಿಗೆ, ಕಾರ್ಯಕರ್ತರಿಗೆ ಕರೆ ನೀಡಿದರು.

ಮುಖ್ಯಮಂತ್ರಿ ಸಿದ್ಧರಾಮಯ್ಯ, ಕಾಂಗ್ರೆಸ್‌ನ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ, ಕೇಂದ್ರದ ಮಾಜಿ ಸಚಿವ ವೀರಪ್ಪ ಮೊಯ್ಲಿ ಮೊದಲಾದವರು ಮಾತನಾಡಿದರು.

Read More
Next Story