ಲೋಕಸಭಾ ಚುನಾವಣೆ: ಸೀಟು ಹಂಚಿಕೆ ಒಪ್ಪಂದ ಅಂತಿಮ, ಶೀಘ್ರದಲ್ಲೇ ಘೋಷಣೆ ಎಂದ ರಾವುತ್
x

ಲೋಕಸಭಾ ಚುನಾವಣೆ: ಸೀಟು ಹಂಚಿಕೆ ಒಪ್ಪಂದ ಅಂತಿಮ, ಶೀಘ್ರದಲ್ಲೇ ಘೋಷಣೆ ಎಂದ ರಾವುತ್

ಪ್ರಕಾಶ್ ಅಂಬೇಡ್ಕರ್ ಅವರ ವಿಬಿಎ ಪಕ್ಷ 27 ಸ್ಥಾನಗಳಿಗೆ ಬೇಡಿಕೆ ಇಟ್ಟಿದೆ ಎಂಬ ವರದಿಗಳನ್ನು ರಾವತ್ ನಿರಾಕರಿಸಿದರು.


ಮುಂಬೈ: ಮಹಾರಾಷ್ಟ್ರದಲ್ಲಿ ಮುಂಬರುವ ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆ ಸೂತ್ರಕ್ಕೆ ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟದ ಸದಸ್ಯರು ಬುಧವಾರ ಒಪ್ಪಿಗೆ ಸೂಚಿಸಿದ್ದು, ಶೀಘ್ರದಲ್ಲೇ ಸೀಟು ಹಂಚಿಕೆ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವುತ್ ಹೇಳಿದ್ದಾರೆ.

ಕಾಂಗ್ರೆಸ್, ಎನ್‌ಸಿಪಿ-ಶರದ್‌ ಪವಾರ್ ಮತ್ತು ಶಿವಸೇನೆ (ಯುಬಿಟಿ) ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೀಟು ಹಂಚಿಕೆ ಕುರಿತು ಚರ್ಚಿಸಲು ಇನ್ನು ಮುಂದೆ ಯಾವುದೇ ಸಭೆಗಳನ್ನು ನಡೆಸುವುದಿಲ್ಲ ಎಂದು ಹೇಳಿದರು.

"ಶರದ್ ಪವಾರ್, ಉದ್ಧವ್ ಠಾಕ್ರೆ, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ಮತ್ತು ಪ್ರಕಾಶ್ ಅಂಬೇಡ್ಕರ್ ಅವರನ್ನು ಭೇಟಿಯಾಗಿ ಒಪ್ಪಂದಕ್ಕೆ ಅಂತಿಮ ಒಪ್ಪಿಗೆ ಪಡೆಯಲಾಗುತ್ತದೆ. ಆ ಬಳಿಕ ಅದನ್ನು ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಲಾಗುವುದು" ಎಂದು ರಾವುತ್ ಹೇಳಿದರು.

‌ಇದೇ ವೇಳೆ ವಂಚಿತ್‌ ಬಹಜನ ಅಘಾಡಿ (ವಿಬಿಎ) ಪಕ್ಷವು 27 ಸ್ಥಾನಗಳಿಗೆ ಬೇಡಿಕೆ ಇಟ್ಟಿದೆ ಎಂಬ ವರದಿಗಳನ್ನು ರಾವುತ್ ನಿರಾಕರಿಸಿದರು.

48 ಲೋಕಸಭಾ ಸ್ಥಾನಗಳ ಕುರಿತು ಸಮಗ್ರ ಚರ್ಚೆ ನಡೆದಿದ್ದು, ಯಾರು ಎಷ್ಟು ಸ್ಥಾನಕ್ಕೆ ಸ್ಪರ್ಧಿಸುತ್ತಾರೆ ಎಂಬುದು ಮುಖ್ಯವಲ್ಲ, ಗೆಲುವು ಮುಖ್ಯ. "ಪ್ರಜಾಪ್ರಭುತ್ವ ಮತ್ತು ಸಂವಿಧಾನದ ರಕ್ಷಣೆ ನಮ್ಮ ಅಜೆಂಡಾ ಆಗಿದೆ. ಪ್ರಕಾಶ್ ಅಂಬೇಡ್ಕರ್ ಅವರು ಅದೇ ದೃಷ್ಟಿಕೋನವನ್ನು ಹೊಂದಿದ್ದಾರೆ" ಎಂದು ರಾವತ್ ಹೇಳಿದರು.

ಮಹಾರಾಷ್ಟ್ರವು 48 ಲೋಕಸಭಾ ಸ್ಥಾನಗಳನ್ನು ಹೊಂದಿದೆ, ಉತ್ತರ ಪ್ರದೇಶ (80) ನಂತರ ಎರಡನೇ ಅತಿ ಹೆಚ್ಚು ಸ್ಥಾನಗಳನ್ನು ಹೊಂದಿದೆ. ಕಾಂಗ್ರೆಸ್ ಮುಖಂಡರಾದ ಪಟೋಲೆ, ಪೃಥ್ವಿರಾಜ್ ಚವ್ಹಾಣ್, ವರ್ಷ ಗಾಯಕ್ವಾಡ್, ಎನ್‌ಸಿಪಿ (ಶರದ್ ಪವಾರ್ ಬಣ) ನಾಯಕರಾದ ಜಯಂತ್ ಪಾಟೀಲ್, ಜಿತೇಂದ್ರ ಅವ್ಹಾದ್ ಮತ್ತು ಅನಿಲ್ ದೇಶಮುಖ್ ಮತ್ತು ಶಿವಸೇನೆಯ (ಯುಬಿಟಿ) ಸಂಜಯ್ ರಾವುತ್ ಮತ್ತು ವಿನಾಯಕ್ ರಾವುತ್ ಸಭೆಯಲ್ಲಿ ಭಾಗವಹಿಸಿದ್ದರು. ಪ್ರಕಾಶ್ ಅಂಬೇಡ್ಕರ್ ನೇತೃತ್ವದ ವಂಚಿತ್ ಬಹುಜನ ಅಘಾಡಿ (ವಿಬಿಎ) ಪ್ರತಿನಿಧಿಯೂ ಉಪಸ್ಥಿತರಿದ್ದರು.

2019 ರ ಸಾರ್ವತ್ರಿಕ ಚುನಾವಣೆಯಲ್ಲಿ, ರಾಜ್ಯದಲ್ಲಿ ಬಿಜೆಪಿ 23 ಲೋಕಸಭಾ ಸ್ಥಾನಗಳನ್ನು ಗೆದ್ದಿತ್ತು, ಅದರ ಮೈತ್ರಿ ಪಾಲುದಾರ ಶಿವಸೇನೆ (ಆಗ ಅವಿಭಜಿತ) 18 ಸ್ಥಾನಗಳನ್ನು ಗೆದ್ದಿತ್ತು, ಅವಿಭಜಿತ ಎನ್‌ಸಿಪಿ ನಾಲ್ಕು ಸ್ಥಾನಗಳನ್ನು ಗೆದ್ದಿತ್ತು ಮತ್ತು ಕಾಂಗ್ರೆಸ್ ಮತ್ತು ಎಐಎಂಐಎಂ ತಲಾ ಒಂದು ಸ್ಥಾನವನ್ನು ಗೆದ್ದಿದ್ದವು. ಒಂದು ಸ್ಥಾನದಲ್ಲಿ ಸ್ವತಂತ್ರ ಅಭ್ಯರ್ಥಿ ಗೆದ್ದಿದ್ದರು.

Read More
Next Story