ಕೇಂದ್ರ ಸಚಿವ ನಾರಾಯಣ ಸ್ವಾಮಿಗೆ ಕೈತಪ್ಪಿದ  ಚಿತ್ರದುರ್ಗ ಕ್ಷೇತ್ರ; ಕಾರಜೋಳ ಕಣಕ್ಕೆ
x

ಕೇಂದ್ರ ಸಚಿವ ನಾರಾಯಣ ಸ್ವಾಮಿಗೆ ಕೈತಪ್ಪಿದ ಚಿತ್ರದುರ್ಗ ಕ್ಷೇತ್ರ; ಕಾರಜೋಳ ಕಣಕ್ಕೆ


ಹಾಲಿ ಕೇಂದ್ರ ಸಚಿವ ಹಾಗೂ ಚಿತ್ರದುರ್ಗ ಮೀಸಲು ಕ್ಷೇತ್ರದ ಸಂಸದ ಎ. ನಾರಾಯಣ ಸ್ವಾಮಿ ಅವರಿಗೆ ಬಿಜೆಪಿ ಟಿಕೆಟ್‌ ಕೈತಪ್ಪಿದ್ದು, ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಅವರನ್ನು ಕಣಕ್ಕಿಳಿಸಲಾಗಿದೆ.

ಇದರಿಂದ ಬಿಜೆಪಿ ೨೫ ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳ ಹೆಸರುಗಳನ್ನು ಅಂತಿಮಗೊಳಿಸಿದೆ. ಮೊದಲ ಪಟ್ಟಿಯಲ್ಲಿ ೨೦ ಹೆಸರುಗಳನ್ನು ಪ್ರಟಿಸಿದ್ದ ಬಿಜೆಪಿ ಎರಡನೇ ಪಟ್ಟಿಯಲ್ಲಿ ನಾಲ್ಕು ಮಂದಿ ಅಭ್ಯರ್ಥಿಗಳ ಹೆಸರುಗಳನ್ನು ಪ್ರಕಟಿಸಿತ್ತು. ಈಗ ಚಿತ್ರದುರ್ಗ ಕ್ಷೇತ್ರದ ಅಭ್ಯರ್ಥಿಯ ಹೆಸರನ್ನು ಅಂತಿಮಗೊಳಿಸಿದೆ. ಪರಿಶಿಷ್ಟ ಜಾತಿಗೆ ಮೀಸಲು ಕ್ಷೇತ್ರವಾದ ಚಿತ್ರದುರ್ಗವನ್ನು ಪ್ರತಿನಿಧಿಸುತ್ತಿದ್ದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ಅವರು ಈ ಬಾರಿ ಚುನಾವಣೆಗೆ ಸ್ಪರ್ಧಿಸುವ ಆಸಕ್ತಿ ಹೊಂದಿರಲಿಲ್ಲ ಎನ್ನಲಾಗಿದೆ.

ಬಿಜೆಪಿ ತನ್ನಮಿತ್ರ ಪಕ್ಷ ಜೆಡಿಎಸ್‌ಗೆ ಮೂರು ಕ್ಷೇತ್ರಗಳನ್ನು ಅಂದರೆ ಮಂಡ್ಯ, ಹಾಸನ ಮತ್ತು ಕೋಲಾರ ಲೋಕಸಭಾ ಕ್ಷೇತ್ರಗಳನ್ನು ಬಿಟ್ಟುಕೊಟ್ಟಿದೆ.

Read More
Next Story