
ಕರ್ನಾಟಕದ "ಆನೆ" ಮೇಲೆ ಸುಳ್ಳು ಆರೋಪ: ಬಿಜೆಪಿ ಆಕ್ರೋಶ, ಏನಿದು ವಿವಾದ ?
ಕಾಂಗ್ರೆಸ್ ಹೈಕಮ್ಯಾಂಡ್ ಮೆಚ್ಚಿಸಲು ರಾಜ್ಯದ ತೆರಿಗೆ ಪೋಲು ಆರೋಪ
ಕರ್ನಾಟಕದ "ಆನೆ"ಯ ಮೇಲೆ ಸುಳ್ಳು ಆರೋಪ ಮಾಡಲಾಗಿದ್ದು, ಅದನ್ನು ಪರೋಕ್ಷವಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ ಸಮ್ಮತಿಸಿದೆ ಎಂದು ರಾಜ್ಯ ಬಿಜೆಪಿ ಮುಖಂಡರು ಆರೋಪಿಸಿದ್ದಾರೆ.
ವಯನಾಡ್ ಸಂಸದ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಕ್ಷೇತ್ರದಲ್ಲಿ ಈ ಘಟನೆ ನಡೆದಿರುವುದರಿಂದ ರಾಜ್ಯ ಸರ್ಕಾರ ೧೫ ಲಕ್ಷ ರೂಪಾಯಿ ಪರಿಹಾರ ಹಣ ಬಿಡುಗಡೆ ಮಾಡಿದೆ ಎಂದು ರಾಜ್ಯ ಬಿಜೆಪಿ
ಕರ್ನಾಟಕ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆನೆ ದಾಳಿಯಿಂದ ಸಾವನ್ನಪ್ಪಿದ ಕೇರಳದ ವ್ಯಕ್ತಿಯ ಕುಟುಂಬದವರಿಗೆ ಕರ್ನಾಟಕ ಸರ್ಕಾರದಿಂದ 15 ಲಕ್ಷ ರೂಪಾಯಿಯನ್ನು ಅಕ್ರಮವಾಗಿ ಹಂಚಿಕೆ ಮಾಡಲಾಗಿದೆ ಎಂದು ಬಿಜೆಪಿ ಆರೋಪಿಸಿದೆ.
ಕರ್ನಾಟಕದ ಕಾಂಗ್ರೆಸ್ ಸರ್ಕಾರವು ತೆರಿಗೆದಾರರ ಹಣವನ್ನು ಹೈಕಮ್ಯಾಂಡ್ ಮೆಚ್ಚಿಸುವುದಕ್ಕೆ ಬಳಸುತ್ತಿದೆ. ಇದು ಅವಮಾನಕರ ಬೆಳವಣಿಗೆ ಎಂದು ಕಿಡಿಕಾರಿದ್ದಾರೆ.
ವಯನಾಡ್‌ನಲ್ಲಿ ಮೃತಪಟ್ಟ ವ್ಯಕ್ತಿಗೆ ಅಕ್ರಮವಾಗಿ 15 ಲಕ್ಷ ರೂಪಾಯಿ ಮೊತ್ತವನ್ನು ರಾಜ್ಯದಿಂದ ಬಿಡುಗಡೆ ಮಾಡಲಾಗಿದೆ. ಕರ್ನಾಟಕದ ಆನೆಯ ಮೇಲೆ ಸುಳ್ಳು ಆರೋಪ ಹೊರಿಸಲಾಗಿದೆ.
ಕರ್ನಾಟಕದಾದ್ಯಂತ ಬರ ಇದೆ. ನೂರಾರು ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರವು ನಾಚಿಕೆಯಿಲ್ಲದೆ
ರಾಜ್ಯದ ತುರ್ತು ಅಗತ್ಯಗಳನ್ನು ಪರಿಹರಿಸುವ ಬದಲು ರಾಹುಲ್ ಗಾಂಧಿಯನ್ನು ಮೆಚ್ಚಿಸಲು ಆದ್ಯತೆ ನೀಡಿದೆ ಎಂದಿದ್ದಾರೆ.
ಕಾಂಗ್ರೆಸ್ ಹೈಕಮಾಂಡ್‌ನ ದುರಾಸೆಗೆ ತಕ್ಕಂತೆ ಕರ್ನಾಟಕದ ತೆರಿಗೆದಾರರ ಹಣ ಮತ್ತು ರಾಜ್ಯದ ಖಜಾನೆಯನ್ನು ಅನೈತಿಕವಾಗಿ ಲೂಟಿ ಮಾಡಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಅವರು ಹೊಣೆಯಾಗಬೇಕು.
ಕಾಂಗ್ರೆಸ್ ಪಕ್ಷದ ಉಳಿವಿಗಾಗಿ ರಾಜ್ಯದ ಬೊಕ್ಕಸವನ್ನು ಲೂಟಿ ಮಾಡಲಾಗುತ್ತಿದೆ ಎಂದಿದ್ದಾರೆ.
ರಾಜ್ಯ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು, ಆನೆ ದಾಳಿಯಿಂದ ಸಾವನ್ನಪ್ಪಿದ ಕೇರಳದ ವ್ಯಕ್ತಿಯ ಕುಟುಂಬದವರಿಗೆ ಪರಿಹಾರ ನೀಡಲು ಸರ್ಕಾರ ಒಪ್ಪಿದೆ ಎಂದಿದ್ದರು.
2023ರ ನವೆಂಬರ್ 30ರಂದು ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನಲ್ಲಿ ದಂತರಹಿತ ಗಂಡು ಆನೆಯನ್ನು ಸೆರೆಹಿಡಿದು, ಬಂಡೀಪುರ ಅರಣ್ಯ ಪ್ರದೇಶಕ್ಕೆ ಸ್ಥಳಾಂತರಿಸಲಾಗಿತ್ತು.
ಆ ಆನೆ ಈಚೆಗೆ ಕೇರಳದ ವಯನಾಡ್ ಜಿಲ್ಲೆಗೆ ದಾರಿ ತಪ್ಪಿ ಬಂದಿದ್ದು ವರದಿಯಾಗಿತ್ತು.
ಫೆಬ್ರವರಿ 10 ರಂದು ಕೇರಳದ ವಯನಾಡ್ ಜಿಲ್ಲೆಯಲ್ಲಿ ಆನೆಯ ದಾಳಿಗೆ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದರು.
ಇದರ ನಂತರ, ಚುನಾಯಿತ ಪ್ರತಿನಿಧಿಗಳು ಮತ್ತು ಕೇರಳ ಸರ್ಕಾರವು ಮಾನವೀಯತೆಯ ದೃಷ್ಟಿಯಿಂದ ಕರ್ನಾಟಕ ಸರ್ಕಾರ ಪರಿಹಾರ ನೀಡಬೇಕು ಎಂದು ಮನವಿ ಮಾಡಿತ್ತು.
ಈಶ್ವರ ಖಂಡ್ರೆ ಅವರು ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ. ಜ