ಅತುಲ್ ಆತ್ಮಹತ್ಯೆ ಪ್ರಕರಣ:  ಟೆಕ್ಕಿಗಳಿಂದ ನ್ಯಾಯಕ್ಕಾಗಿ ಕ್ಯಾಂಡಲ್‌ಲೈಟ್‌  ಪ್ರತಿಭಟನೆ
x
ಸಾಫ್ಟವೇರ್ ಉದ್ಯೋಗಿ ಅತುಲ್ ಆತ್ಮಹತ್ಯೆಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಯಿತು

ಅತುಲ್ ಆತ್ಮಹತ್ಯೆ ಪ್ರಕರಣ: ಟೆಕ್ಕಿಗಳಿಂದ ನ್ಯಾಯಕ್ಕಾಗಿ ಕ್ಯಾಂಡಲ್‌ಲೈಟ್‌ ಪ್ರತಿಭಟನೆ

ಸಾಫ್ಟವೇರ್ ಉದ್ಯೋಗಿ ಅತುಲ್ ಸುಭಾಷ್ ಸಾವಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಬೆಂಗಳೂರಿನ ಎಕೋಸ್ಪೇಸ್​ನಲ್ಲಿ ಗುರುವಾರ ರಾತ್ರಿ ಮೋಂಬತ್ತಿ ಹಾಗೂ ಮೊಬೈಲ್ ಟಾರ್ಚ್ ಬೆಳಗಿಸಿ ಪ್ರತಿಭಟನೆ ನಡೆಯಿತು.


ಸಾಫ್ಟವೇರ್ ಉದ್ಯೋಗಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣಕ್ಕೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಗುರುವಾರ ರಾತ್ರಿ ಬೆಂಗಳೂರಿನ ಎಕೋಸ್ಪೇಸ್​ನಲ್ಲಿ ಮೋಂಬತ್ತಿ ಬೆಳಗಿಸಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯಲ್ಲಿ ಭಾವಹಿಸಿದ್ದ ಟೆಕ್ಕಿಗಳು ಮೋಂಬತ್ತಿ ಹಾಗೂ ಮೊಬೈಲ್ ಟಾರ್ಚ್ ಬೆಳಗಿಸಿ ಅತುಲ್ ಸಾವಿಗೆ ಕಂಬನಿ ಮಿಡಿದರು. ಫ್ಯಾಮಿಲಿ ಫೌಂಡೇಶನ್ ಆಶ್ರಯದಲ್ಲಿ ನಡೆದ ಕ್ಯಾಂಡಲ್​ಲೈಟ್ ಮೆರವಣಿಗೆಯಲ್ಲಿ ಸಾಫ್ಟವೇರ್ ಉದ್ಯೋಗಿಗಳು ಸೇರಿದಂತೆ ನೂರಾರು ಜನರು ಭಾಗವಹಿಸಿದ್ದರು.

ಕ್ಯಾಂಡಲ್‌ಲೈಟ್ ಮೆರವಣಿಗೆಯಲ್ಲಿ‌ ಅತುಲ್ ಸಾವಿನ ಕುರಿತು ಸೂಕ್ತ ತನಿಖೆ ನಡೆಸಬೇಕು. ಪ್ರಕರಣಕ್ಕೆ ಸಂಬಂಧಿಸಿದ ಎಲ್ಲರನ್ನೂ ತಕ್ಷಣವೇ ಬಂಧಿಸಿ ವಿಚಾಣೆಗೆ ಒಳಪಡಿಸಬೇಕು. ಜೊತೆಗೆ ಸಾವಿಗೆ ಕಾರಣವಾಗಿರುವ ಎಲ್ಲಾ ಆರೋಪಿಗಳಿಗೆ ತಕ್ಕ ಶಿಕ್ಷೆ ಆಗಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಅತುಲ್ ಸಾವು ಭಾರತದ ನ್ಯಾಯಸಂಹಿತೆ, ಅದರಲ್ಲಿಯೂ ಪುರುಷರ ವೈವಾಹಿಕ ಸಮಸ್ಯೆಗಳನ್ನು ಇತ್ಯರ್ಥಪಡಿಸುವ ವಿಷಯಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ವ್ಯವಸ್ಥೆಯನ್ನೇ ಪ್ರಶ್ನೆ ಮಾಡುವಂತಿದೆ ಎಂದು ಇದೇ ಸಂದರ್ಭದಲ್ಲಿ ಪ್ರತಿಭಟನಾಕಾರರು ಆತಂಕ ವ್ಯಕ್ತಪಡಿಸಿದರು.

ದೇಶಾದ್ಯಂತ ಮತ್ತೊಮ್ಮೆ ಚರ್ಚೆ ಹುಟ್ಟು ಹಾಕಿದ ಅತುಲ್ ಆತ್ಮಹತ್ಯೆ

ಪುರುಷರ ಮೇಲಿನ ದೌರ್ಜನಕ್ಕೆ ಸಂಬಂಧಿಸಿದಂತೆ ಟೆಕ್ಕಿ ಅತುಲ್ ಆತ್ಮಹತ್ಯೆ ಪ್ರಕರಣ ಇಡೀ ದೇಶಾದ್ಯಂತ ಮತ್ತೊಮ್ಮೆ ಚರ್ಚೆಯನ್ನು ಹುಟ್ಟುಹಾಕಿದೆ. ತಮ್ಮ ಮೇಲೆ ಪತ್ನಿ ಮಾಡಿದ್ದ ಆರೋಪಗಳ ಕುರಿತು ಸಂಪೂರ್ಣವಾಗಿ ವಿವರ ನೀಡುವ ಮೂಲಕ, ತಮಗೆ ನ್ಯಾಯಾಲಯದಿಂದ ಅನ್ಯಾಯವಾಗಿದೆ ಎಂಬ ಗಂಭೀರ ಆರೋಪವನ್ನು ಅತುಲ್ ಮಾಡಿದ್ದರು. ಅವರ ಸಾವಿ ಆವರ ಡೆತ್‌ನೋಟ್‌ ಮೂಲಕ ಅದು ಬಹಿರಂಗವಾಗಿತ್ತು.

ಸುದೀರ್ಘ ಡೆತ್‌ನೋಟ್‌ ಬರೆದಿಟ್ಟು, ಆತ್ಮಹತ್ಯೆ ಮಾಡಿಕೊಂಡಿರುವ ಖಾಸಗಿ ಕಂಪನಿ ಉದ್ಯೋಗಿ ಅತುಲ್‌ ಆತ್ಮಹತ್ಯೆ ಪ್ರಕರಣ ಇಡೀ ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಕೇವಲ ಕಿರುಕುಳದ ಆರೋಪ ಸಾಲುವುದಿಲ್ಲ: ಸುಪ್ರೀಂ ಕೋರ್ಟ್​ ಅಭಿಪ್ರಾಯ

ಈ ಮಧ್ಯೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಅಪರಾಧದಲ್ಲಿ ಆರೋಪಿಗಳನ್ನು ತಪ್ಪಿತಸ್ಥರೆಂದು ಪರಿಗಣಿಸಲು ಕೇವಲ ಕಿರುಕುಳದ ಸಾಕ್ಷಿಗಳು ಮಾತ್ರ ಸಾಲುವುದಿಲ್ಲ. ನೇರ ಅಥವಾ ಪರೋಕ್ಷ ಪ್ರಚೋದನೆ ಮಾಡಿರುವುದಕ್ಕೆ ಸ್ಪಷ್ಟ ಪುರಾವೆಗಳು ಅತ್ಯಗತ್ಯ ಎಂದು ಸುಪ್ರೀಂ ಕೋರ್ಟ್ ಗುರವಾರ ಅಭಿಪ್ರಾಯಪಟ್ಟಿತ್ತು.

ಬೆಂಗಳೂರಿನ ಟೆಕ್ಕಿ ಅತುಲ್ ಸುಭಾಷ್, ಪತ್ನಿ ಮತ್ತು ಅವರ ಕುಟುಂಬ ಸದಸ್ಯರ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೇಳಿಕೊಂಡ ಬಳಿಕ ಉಂಟಾಗಿರುವ ಸಾರ್ವಜನಿಕ ಚರ್ಚೆಯ ನಡುವೆ ಸುಪ್ರೀಂಕೋರ್ಟ್ ಈ ಅಭಿಪ್ರಾಯ ವ್ಯಕ್ತಪಡಿಸಿತ್ತು.

ಅತುಲ್ ಆತ್ಮಹತ್ಯೆ ಪ್ರಕರಣದ ವಿವರ

ಪತ್ನಿ ಹಾಗೂ ಆಕೆಯ ಕುಟುಂಬದವರ ಕಿರುಕುಳದ ಆರೋಪ ಮಾಡಿ ಅತುಲ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರ ಸಹೋದರ ಬಿಕಾಸ್ ಕುಮಾರ್ ಕೊಟ್ಟಿದ್ದ ದೂರಿಗೆ ಸಂಬಂಧಿಸಿದಂತೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಬೆಂಗಳೂರಿನ ಮಾರತ್ತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಸಾವೀಗೀಡಾದ ಅತುತ್ ಪತ್ನಿ ನಿಖಿತಾ ಸಿಂಘಾನಿಯಾ, ಆಕೆಯ ತಾಯಿ ನಿಶಾ ಸಿಂಘಾನಿಯಾ, ಸಹೋದರ ಅನುರಾಗ್ ಸಿಂಘಾನಿಯಾ ಹಾಗೂ ಸಂಬಂಧಿ ಸುಶೀಲ್ ಸಿಂಘಾನಿಯಾ ವಿರುದ್ಧ ಪೊಲೀಸರು ಕೇಸ್ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

Read More
Next Story