Loksabha Election Results 2024| ಬಿಜೆಪಿ+ ಜೆಡಿಎಸ್‌ -19 , ಕಾಂಗ್ರೆಸ್- 9
x

Loksabha Election Results 2024| ಬಿಜೆಪಿ+ ಜೆಡಿಎಸ್‌ -19 , ಕಾಂಗ್ರೆಸ್- 9

ಲೋಕಸಭೆ ಚುನಾವಣೆಯ ಫಲಿತಾಂಶಕ್ಕೆ ಕ್ಷಣ ಗಣನೆ ಆರಂಭವಾಗಿದ್ದು, ರಾಜ್ಯದ 28 ಕ್ಷೇತ್ರಗಳ ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಇಂದು ನಿರ್ಧಾರವಾಗಲಿದೆ. ಇಂದು ಬೆಳಿಗ್ಗೆ 8 ರಿಂದಲೇ ಮತ ಎಣಿಕೆ ಆರಂಭವಾಗಲಿದೆ. ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ ʻದ ಫೆಡರಲ್‌ ಕರ್ನಾಟಕʼ ವೆಬ್‌ ಪೋರ್ಟಲ್‌ನಲ್ಲಿ ಲಭ್ಯ.


ಲೋಕಸಭೆ ಚುನಾವಣೆಯ ಫಲಿತಾಂಶಕ್ಕೆ ಕ್ಷಣ ಗಣನೆ ಆರಂಭವಾಗಿದ್ದು, ರಾಜ್ಯದ 28 ಕ್ಷೇತ್ರಗಳ ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಇಂದು ನಿರ್ಧಾರವಾಗಲಿದೆ. ಇಂದು ಬೆಳಿಗ್ಗೆ 8 ರಿಂದಲೇ ಮತ ಎಣಿಕೆ ಆರಂಭವಾಗಲಿದೆ.

ಮತ ಎಣಿಕೆ ಕಾರ್ಯಕ್ಕಾಗಿ ಚುನಾವಣಾ ಆಯೋಗ ವ್ಯಾಪಕ ತಯಾರಿ ಮಾಡಿಕೊಂಡಿದ್ದು, ಆಯಾ ಲೋಕಸಭಾ ಕ್ಷೇತ್ರಗಳ ಜಿಲ್ಲಾ ಕೇಂದ್ರಗಳಲ್ಲಿ ಮತಪೆಟ್ಟಿಗೆಗಳನ್ನು ಇಟ್ಟಿರುವ ಮತ ಎಣಿಕೆ ಕೇಂದ್ರಗಳಲ್ಲಿ ಬೆಳಿಗ್ಗೆ 8 ರಿಂದಲೇ ಮತ ಎಣಿಕೆ ಆರಂಭವಾಗಲಿದೆ. ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠರ ನೇತೃತ್ವದಲ್ಲಿ ಮತ ಎಣಿಕೆ ಸುಸೂತ್ರವಾಗಿ ನಡೆಯಲು ಅಗತ್ಯವಿರುವ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ವ್ಯಾಪಕ ಬಂದೋಬಸ್ತಿನ ಏರ್ಪಾಡು ಕೂಡ ಆಗಿದೆ.

Live Updates

  • 4 Jun 2024 7:20 AM GMT

    ಬೆಳಗಾವಿ ಲೋಕಸಭಾ ಕ್ಷೇತ್ರ

    ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯ ಅಭ್ಯರ್ಥಿ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಅವರು ಭರ್ಜರಿ ಗೆಲುವು ಪಡೆದಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ವಿರುದ್ಧ ಜಯಭೇರಿ ಬಾರಿಸಿದ್ದಾರೆ.

  • 4 Jun 2024 7:18 AM GMT

    ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್‌ ಗಳಿಕೆ, ಮಲೆನಾಡು- ಕರಾವಳಿಯಲ್ಲಿ ಸ್ಥಾನ ಉಳಿಸಿಕೊಂಡ ಬಿಜೆಪಿ, ಹಳೇಮೈಸೂರು ಭಾಗದಲ್ಲಿ ನೆಲೆ ವಿಸ್ತರಿಸಿಕೊಂಡ ಜೆಡಿಎಸ್‌

  • 4 Jun 2024 7:18 AM GMT

    ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ

    ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯ ಮಾಜಿ ಸಚಿವ ಡಾ ಕೆ ಸುಧಾಕರ್‌ ಅವರು ಭರ್ಜರಿ ಗೆಲುವು ಪಡೆದಿದ್ದಾರೆ. ಕಾಂಗ್ರೆಸ್‌ನ ರಕ್ಷಾ ರಾಮಯ್ಯ ವಿರುದ್ಧ ವಿರುದ್ಧ ಜಯಭೇರಿ ಬಾರಿಸಿದ್ದಾರೆ.


  • 4 Jun 2024 7:16 AM GMT

    ಬಳ್ಳಾರಿ ಲೋಕಸಭಾ ಕ್ಷೇತ್ರ

    ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್‌ನ ತುಕಾರಾಂ  ಅವರು ಭರ್ಜರಿ ಗೆಲುವು ಪಡೆದಿದ್ದಾರೆ. ಬಿಜೆಪಿಯ  ಮಾಜಿ ಸಚಿವ ಬಿ ಶ್ರೀರಾಮುಲು ವಿರುದ್ಧ ಜಯಭೇರಿ ಬಾರಿಸಿದ್ದಾರೆ.

  • 4 Jun 2024 7:14 AM GMT

    ಚಿತ್ರದುರ್ಗ ಲೋಕಸಭಾ ಕ್ಷೇತ್ರ

    ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯ ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಭರ್ಜರಿ ಗೆಲುವು ಪಡೆದಿದ್ದಾರೆ. ಕಾಂಗ್ರೆಸ್ಸಿನ ಎಂ ಚಂದ್ರಪ್ಪ ವಿರುದ್ಧ ಜಯಭೇರಿ ಬಾರಿಸಿದ್ದಾರೆ.

  • 4 Jun 2024 7:10 AM GMT

    ಕುಮಾರಸ್ವಾಮಿಗೆ ಭರ್ಜರಿ ಗೆಲುವು

    ಮಂಡ್ಯ ಲೋಕಸಭಾ ಕ್ಷೇತ್ರದಿಂದ ಮಾಜಿ ಸಿಎಂ, ಜೆಡಿಎಸ್‌ ಅಭ್ಯರ್ಥಿ ಹೆಚ್‌ಡಿ ಕುಮಾರಸ್ವಾಮಿ ಅವರು 2 ಲಕ್ಷ ಮತಗಳ ಅಂತರದಿಂದ ಭರ್ಜರಿ ಗೆಲುವು ಪಡೆದಿದ್ದಾರೆ. ಕಾಂಗ್ರೆಸ್ಸಿನ ಸ್ಟಾರ್‌ ಚಂದ್ರು ವಿರುದ್ಧ ಜಯಭೇರಿ ಬಾರಿಸಿದ್ದಾರೆ. ಈ ಕ್ಷೇತ್ರದಲ್ಲಿ ಅತಿಹೆಚ್ಚು ಮತದಾನ ಆಗಿತ್ತು.

  • 4 Jun 2024 7:06 AM GMT

    ಉತ್ತರ ಕನ್ನಡದಲ್ಲಿ ಬಿಜೆಪಿ ಜಯಭೇರಿ

    ಉತ್ತರಕನ್ನಡ ಲೋಕಸಭಾ ಕ್ಷೇತ್ರದಿಂದ ವಿಧಾನಸಭಾ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಭರ್ಜರಿ ಗೆಲುವು ಪಡೆದಿದ್ದಾರೆ. ಕಾಂಗ್ರೆಸ್ಸಿನ ಅಂಜಲಿ ನಿಂಬಾಳ್ಕರ್‌ ವಿರುದ್ಧ ಜಯಭೇರಿ ಬಾರಿಸಿದ್ದಾರೆ.

  • 4 Jun 2024 7:05 AM GMT

    ಹಾಸನದಲ್ಲಿ ಪ್ರಜ್ವಲ್‌ ರೇವಣ್ಣಗೆ ಹೀನಾಯ ಸೋಲು

    ತೀವ್ರ ಕೂತುಹಲ ಮೂಡಿಸಿದ್ದ ಹಾಸನ ಲೋಕಸಭಾ ಕ್ಷೇತ್ರದ ಫಲಿತಾಂಶ ಹೊರಬಿದ್ದಿದ್ದು, ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರ ಮೊಮ್ಮಗ, ಜೆಡಿಎಸ್​ - ಬಿಜೆಪಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರು ಹೀನಾಯವಾಗಿ ಸೋಲು ಅನುಭವಿಸಿದ್ದಾರೆ.

    ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಜೈಲು ಪಾಲಾಗಿರುವ ಪ್ರಜ್ವಲ್ ರೇವಣ್ಣ ವಿರುದ್ಧ ಮಾಜಿ ಸಚಿವ, ದಿವಂಗತ ಜಿ. ಪುಟ್ಟಸ್ವಾಮಿಗೌಡರ ಮೊಮ್ಮಗ, ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್​ 50 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಇದರೊಂದಿಗೆ ಹಾಸನದಲ್ಲಿ 25 ವರ್ಷಗಳ ನಂತರ ಕಾಂಗ್ರೆಸ್ ಗೆಲುವು ಸಾಧಿಸಿದೆ.

  • 4 Jun 2024 6:43 AM GMT

    ಕೋಲಾರ: ಜೆಡಿಎಸ್ (ಎನ್‌ಡಿಎ) ಅಭ್ಯರ್ಥಿ ಮಲ್ಲೇಶ್‌ ಬಾಬು ಗೆಲುವು

    2024ರ ಲೋಕಸಭಾ ಚುನಾವಣೆಯಲ್ಲಿ ಕೋಲಾರದ ಜೆಡಿಎಸ್ ಅಭ್ಯರ್ಥಿ ಮಲ್ಲೇಶ್ ಬಾಬು ಭರ್ಜರಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಅವರ ವಿರುದ್ಧ ಮಲ್ಲೇಶ್​ ಬಾಬು 57 ಸಾವಿರ ಮತಗಳ ಮುನ್ನಡೆ ಸಾಧಿಸಿ ಮತಗಳೊಂದಿಗೆ ಗೆಲುವು ಪಡೆದಿದ್ದಾರೆ. ಒಟ್ಟಾರೆಯಾಗಿ ಜೆಡಿಎಸ್​​ ಪಕ್ಷದ ಮಲ್ಲೇಶ್ ಬಾಬು 6,12,095 ಮತಗಳನ್ನು ಪಡೆದುಕೊಂಡಿದ್ದಾರೆ.

    ಕೋಲಾರದಲ್ಲಿ ಜೆಡಿಎಸ್ ಅಭ್ಯರ್ಥಿ ಮಲ್ಲೇಶ್ ಬಾಬು ಗೆಲುವು ಹಿನ್ನಲೆಯಲ್ಲಿ ಮತ ಎಣಿಕಾ ಕೇಂದ್ರದ ಹೊರಗೆ ಜೆಡಿಎಸ್ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ ನಡೆಸಿದ್ದಾರೆ. ಪಟಾಕಿ ಸಿಡಿಸಿ ಪ್ರಧಾನಿ ಮೋದಿ, ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಪರವಾಗಿ ಘೋಷಣೆ ಕೂಗಿ ಸಂಭ್ರಮಾಚರಣೆ ಮಾಡಿದ್ದಾರೆ.

  • 4 Jun 2024 6:25 AM GMT

    ಕಲಬುರಗಿ ಲೋಕಸಭಾ ಕ್ಷೇತ್ರ

    ಬಿಜೆಪಿ ಅಭ್ಯರ್ಥಿ ಡಾ.ಉಮೇಶ ಜಾಧವ ಅವರು 1,68,592 ಮತಗಳು ಪಡೆದು 7,150 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಅವರು 1,61,442 ಮತಗಳು ಪಡೆದಿದ್ದಾರೆ.

Read More
Next Story