Loksabha Election Results 2024| ಬಿಜೆಪಿ+ ಜೆಡಿಎಸ್‌ -19 , ಕಾಂಗ್ರೆಸ್- 9
x

Loksabha Election Results 2024| ಬಿಜೆಪಿ+ ಜೆಡಿಎಸ್‌ -19 , ಕಾಂಗ್ರೆಸ್- 9

ಲೋಕಸಭೆ ಚುನಾವಣೆಯ ಫಲಿತಾಂಶಕ್ಕೆ ಕ್ಷಣ ಗಣನೆ ಆರಂಭವಾಗಿದ್ದು, ರಾಜ್ಯದ 28 ಕ್ಷೇತ್ರಗಳ ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಇಂದು ನಿರ್ಧಾರವಾಗಲಿದೆ. ಇಂದು ಬೆಳಿಗ್ಗೆ 8 ರಿಂದಲೇ ಮತ ಎಣಿಕೆ ಆರಂಭವಾಗಲಿದೆ. ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ ʻದ ಫೆಡರಲ್‌ ಕರ್ನಾಟಕʼ ವೆಬ್‌ ಪೋರ್ಟಲ್‌ನಲ್ಲಿ ಲಭ್ಯ.


ಲೋಕಸಭೆ ಚುನಾವಣೆಯ ಫಲಿತಾಂಶಕ್ಕೆ ಕ್ಷಣ ಗಣನೆ ಆರಂಭವಾಗಿದ್ದು, ರಾಜ್ಯದ 28 ಕ್ಷೇತ್ರಗಳ ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಇಂದು ನಿರ್ಧಾರವಾಗಲಿದೆ. ಇಂದು ಬೆಳಿಗ್ಗೆ 8 ರಿಂದಲೇ ಮತ ಎಣಿಕೆ ಆರಂಭವಾಗಲಿದೆ.

ಮತ ಎಣಿಕೆ ಕಾರ್ಯಕ್ಕಾಗಿ ಚುನಾವಣಾ ಆಯೋಗ ವ್ಯಾಪಕ ತಯಾರಿ ಮಾಡಿಕೊಂಡಿದ್ದು, ಆಯಾ ಲೋಕಸಭಾ ಕ್ಷೇತ್ರಗಳ ಜಿಲ್ಲಾ ಕೇಂದ್ರಗಳಲ್ಲಿ ಮತಪೆಟ್ಟಿಗೆಗಳನ್ನು ಇಟ್ಟಿರುವ ಮತ ಎಣಿಕೆ ಕೇಂದ್ರಗಳಲ್ಲಿ ಬೆಳಿಗ್ಗೆ 8 ರಿಂದಲೇ ಮತ ಎಣಿಕೆ ಆರಂಭವಾಗಲಿದೆ. ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠರ ನೇತೃತ್ವದಲ್ಲಿ ಮತ ಎಣಿಕೆ ಸುಸೂತ್ರವಾಗಿ ನಡೆಯಲು ಅಗತ್ಯವಿರುವ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ವ್ಯಾಪಕ ಬಂದೋಬಸ್ತಿನ ಏರ್ಪಾಡು ಕೂಡ ಆಗಿದೆ.

Live Updates

  • 4 Jun 2024 10:04 AM IST

    ಕಲಬುರಗಿ ಮೀಸಲು ಲೋಕಸಭಾ ಕ್ಷೇತ್ರ

    ಬಿಜೆಪಿ ಅಭ್ಯರ್ಥಿ ಡಾ.ಉಮೇಶ ಜಾಧವ ಅವರು 43,391 ಮತಗಳು ಪಡೆದು 2,216 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.

    ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಅವರು 41,125 ಮತಗಳು ಪಡೆದಿದ್ದಾರೆ.

  • 4 Jun 2024 10:04 AM IST

    ಮೈಸೂರು- ಕೊಡಗು ಲೋಕಸಭಾ ಕ್ಷೇತ್ರ

    ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಯದುವೀರ್ ಮುನ್ನಡೆ ಕಾಯ್ದುಕೊಂಡಿದ್ದಾರೆ. ಅವರು 58,596 ಮತಗಳನ್ನು ಗಳಿಸಿ 7,008 ಮತಗಳಿಂದ ಮುನ್ನಡೆ ಗಳಿಸಿದ್ದಾರೆ. ಕಾಂಗ್ರೆಸ್‌ನ ಎಂ.ಲಕ್ಷ್ಮಣ 51,588 ಮತಗಳನ್ನು ಪಡೆದು ಹಿನ್ನಡೆ ಅನುಭವಿಸಿದ್ದಾರೆ.

  • 4 Jun 2024 9:33 AM IST

    ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ

    ಬೆಂಗಳೂರು ಉತ್ತರದಲ್ಲಿ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಮುನ್ನಡೆ ಸಾಧಿಸಿದ್ದಾರೆ.

  • 4 Jun 2024 9:24 AM IST

    ಚಿಕ್ಕೋಡಿ ಮತ್ತು ಕಲಬುರಗಿಯಲ್ಲಿ ಕಾಂಗ್ರೆಸ್ ಮುನ್ನಡೆ

    ಆರಂಭಿಕ ಟ್ರೆಂಡ್‌ನಲ್ಲಿ ಚಿಕ್ಕೋಡಿ ಮತ್ತು ಕಲಬುರಗಿ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಕಲಬುರಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರು ಕ್ಷೇತ್ರ.

  • 4 Jun 2024 8:47 AM IST

    ಕೋಲಾರ ಲೋಕಸಭಾ ಕ್ಷೇತ್ರ

    ಕೋಲಾರ ಕ್ಷೇತ್ರದಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಮುನ್ನಡೆ ಸಾಧಿಸಿದೆ. ಜೆಡಿಎಸ್ ಸ್ಪರ್ಧಿಸಿರುವ ಮೂರು ಲೋಕಸಭಾ ಕ್ಷೇತ್ರಗಳಲ್ಲಿ ಕೋಲಾರವೂ ಒಂದಾಗಿದೆ. ಮಂಡ್ಯ, ಹಾಸನ ಸ್ಥಾನಗಳಲ್ಲಿ ಜೆಡಿಎಸ್ ಸ್ಪರ್ಧಿಸಿತ್ತು.

  • 4 Jun 2024 8:45 AM IST

    ಚಾಮರಾಜನಗರ ಲೋಕಸಭಾ ಕ್ಷೇತ್ರ

    ಚಾಮರಾಜನಗರ ಲೋಕಸಭಾ ಕ್ಷೇತ್ರದ ಮೊದಲನೇ ಸುತ್ತು ಮುಗಿದಿದ್ದು ಬಿಜೆಪಿ ಅಭ್ಯರ್ಥಿ ಬಾಲರಾಜ್ ಅವರು 512 ಮತಗಳನ್ನು ಪಡೆದ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಅವರು 464 ಮತಗಳನ್ನು ಪಡೆದು ಹಿನ್ನಡೆ. 49 ಮತಗಳ ಅಂತರವಿದೆ.

  • 4 Jun 2024 8:43 AM IST

    ಶಿವಮೊಗ್ಗ ಲೋಕಸಭಾ ಕ್ಷೇತ್ರ

    ಶಿವಮೊಗ್ಗದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಡಾ.ರಾಜ್‌‌ಕುಮಾರ್‌ ಸೊಸೆ ಗೀತಾ ಶಿವರಾಜ್‌ಕುಮಾರ್‌ಗೆ ಹಿನ್ನಡೆಯಾಗಿದೆ. ಬಿ.ವೈ. ರಾಘವೇಂದ್ರ ಮುನ್ನಡೆ ಪಡೆದುಕೊಂಡಿದ್ದಾರೆ. ಬಂಡಾಯ ಅಭ್ಯರ್ಥಿ ಕೆ ಎಸ್‌ ಈಶ್ವರಪ್ಪ ಭಾರೀ ಹಿನ್ನಡೆ..

  • 4 Jun 2024 8:32 AM IST

    ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ

    ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಚುನಾವಣೆ ಮತ ಎಣಿಕೆ ಆರಂಭವಾಗಿದ್ದು, ಅಂಚೆ ಮತಗಳಲ್ಲಿ ಬಿಜೆಪಿಯ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್‌ನ ಎಂ.ಲಕ್ಷ್ಮಣ ಆರಂಭಿಕ ಹಿನ್ನಡೆ ಅನುಭವಿಸಿದ್ದಾರೆ.

  • 4 Jun 2024 8:28 AM IST

    ದಕ್ಷಿಣ ಕನ್ನಡ ಅಂಚೆ ಮತ ಎಣಿಕೆ ಪೂರ್ಣ

    ದಕ್ಷಿಣ ಕನ್ನಡದಲ್ಲಿ ಅಂಚೆ ಎಣಿಕೆ ಪೂರ್ಣಗೊಂಡಿದ್ದು ಬಿಜೆಪಿ ಬ್ರಿಜೇಶ್ ಚೌಟ ಮುನ್ನಡೆ ಸಾಧಿಸಿದ್ದು 2,836 ಮತ ಪಡೆದಿದ್ದಾರೆ. ಕಾಂಗ್ರೆಸ್ ಪದ್ಮರಾಜ್ ಆರ್ ಪೂಜಾರಿ 1,379 ಮತ ಪಡೆದಿದ್ದು 1,457 ಅಂತರದಲ್ಲಿ ಬಿಜೆಪಿ ಅಭ್ಯರ್ಥಿ ಇದ್ದಾರೆ.

  • 4 Jun 2024 8:26 AM IST

    ಹೆಚ್.ಡಿ.ಕುಮಾರಸ್ವಾಮಿ‌ಗೆ ಆರಂಭಿಕ ಮುನ್ನಡೆ

    ಅಂಚೆ ಮತಗಳ ಎಣಿಕೆ ಆರಂಭವಾಗಿದ್ದು ಮಂಡ್ಯ ಲೋಕಸಭಾ ಚುನಾವಣೆ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಹೆಚ್.ಡಿ.ಕುಮಾರಸ್ವಾಮಿ‌ಗೆ ಆರಂಭಿಕ ಮುನ್ನಡೆ ಸಿಕ್ಕಿದೆ. ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರುಗೆ‌ ಹಿನ್ನಡೆಯಾಗಿದೆ.

Read More
Next Story