CAFE BLAST | ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ: ಒಂಬತ್ತು ಜನರಿಗೆ ಗಾಯ
x

CAFE BLAST | ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ: ಒಂಬತ್ತು ಜನರಿಗೆ ಗಾಯ


ನಗರದ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ(ನಿಗೂಢ ವಸ್ತು ಸ್ಫೋಟವಾಗಿದೆ. ಘಟನೆಯಲ್ಲಿ ಹಲವರಿಗೆ ಗಾಯಗಳಾಗಿವೆ. ಸ್ಫೋಟದ ತೀವ್ರತೆಗೆ ರಾಮೇಶ್ವರಂ ಕೆಫೆ ಹಾನಿಯಾಗಿದ್ದು, ಐವರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಕೂಡಲೇ ಖಾಸಸಿ ಆಸ್ಪತ್ರೆಗೆ ಸಾಗಿಸಲಾಗಿದೆ. ಸ್ಪೋಟವಾಗುತ್ತಿದ್ದಂತೆಯೇ ಜನರು ಭಯಭೀತರಾಗಿ ಓಡಿಡಾಡಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಎಸಿಪಿ ರೀನಾ ಸುವರ್ಣ ಮತ್ತು ಮಾರತ್ತಹಳ್ಳಿ ಪೊಲೀಸರು ಸಹ ಸ್ಳಳಕ್ಕೆ ಬಂದಿದ್ದು, ಸುಟ್ಟ ಸ್ಥಿತಿಯಲ್ಲಿರುವ ಬ್ಯಾಗ್ ಹಾಗೂ ಸ್ಥಳದಲ್ಲಿ ಸಿಕ್ಕ ಐಡಿ ಕಾರ್ಡ್ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಇನ್ನು ಹೋಟೆಲ್ನ ಸಿಸಿಟಿವಿಗಳನ್ನು ಸಹ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಸ್ಫೋಟದ ಹಿಂದೆ ಕಿಡಿಗೇಡಿಗಳ ಕೃತ್ಯ ಶಂಕೆ ವ್ಯಕ್ತವಾಗಿದ್ದು, ಘಟನಾ ಸ್ಥಳಕ್ಕೆ ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರು ಆಗಮಿಸಿದ್ದಾರೆ. ಅಗತ್ಯ ಉಪಕರಣಗಳ ಜೊತೆ ರಾಮೇಶ್ವರಂ ಕೆಫೆಗೆ ಬಂದಿರುವ FSL ತಂಡ ಪರಿಶೀನಲನೆ ನಡೆಸಿದೆ.

ಘಟನೆ ನಡೆದ ಸ್ಥಳಕ್ಕೆ ಹೆಚ್ಎಎಲ್ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಇತ್ತ ಅಗ್ನಿಶಾಮಕದಳದ ಸಿಬ್ಬಂದಿಯೂ ಆಗಮಿಸಿದೆ. ಕೆಫೆಯಲ್ಲಿ ಸಿಲಿಂಡರ್ ಸ್ಫೋಟವಾಗಿದೆ ಎಂದು ಹೇಳಲಾಗುತ್ತಿದ್ದು, ಆದರೆ ಈ ಬಗ್ಗೆ ನಿಖರ ಮಾಹಿತಿ ಲಭ್ಯವಾಗಿಲ್ಲ.

ರಾಮೇಶ್ವರಂ ಕೆಫೆ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಗಳನ್ನು ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಪೊಲೀಸರು ರಾಮೇಶ್ವರಂ ಕೆಫೆಯನ್ನು ಇಂಚಿಂಚೂ ಪರಿಶೀಲನೆ ನಡೆಸುತ್ತಿದ್ದಾರೆ.

ಕಿಚನ್‌ನಲ್ಲಿ ಯಾವುದೇ ಸ್ಪೋಟವಾಗಿಲ್ಲ ಎಂದು ಹೇಳಲಾಗುತ್ತಿದೆ. ಗ್ರಾಹಕರು ಊಟ ಮಾಡುವ ಸಮಯದಲ್ಲಿ ಬ್ಯಾಗ್ ವೊಂದರಲ್ಲಿದ್ದ ವಸ್ತು ಸ್ಫೋಟವಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

Read More
Next Story