ಪ್ರಜ್ವಲ್‌ ಪ್ರಕರಣ: ಹೆಚ್‌ಡಿ ರೇವಣ್ಣಗೆ ಲುಕ್‌ಔಟ್‌ ನೋಟೀಸ್ ಜಾರಿ
x

ಪ್ರಜ್ವಲ್‌ ಪ್ರಕರಣ: ಹೆಚ್‌ಡಿ ರೇವಣ್ಣಗೆ ಲುಕ್‌ಔಟ್‌ ನೋಟೀಸ್ ಜಾರಿ


ಬಂಧನದ ಭೀತಿ ಎದುರಿಸುತ್ತಿರುವ ಜೆಡಿಎಸ್‌ ಶಾಸಕ ಹೆಚ್‌ಡಿ ರೇವಣ್ಣಗೆ ಇದೀಗ ಮತ್ತೊಂದು ಶಾಕ್‌ ಎದುರಾಗಿದೆ. ದೇಶ ಬಿಟ್ಟು ಹೋಗುವ ಸಾಧ್ಯತೆ ಹಿನ್ನೆಲೆಯಲ್ಲಿ‌ ಎಸ್‌ಐಟಿ ಲುಕ್‌ಔಟ್‌ ನೋಟೀಸ್ ಜಾರಿ ಮಾಡಿದೆ.

ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ನೋಟಿಸ್ ಕೊಟ್ಟಿದ್ದರೂ ರೇವಣ್ಣ ಗೈರಾಗಿದ್ದಾರೆ. ಕಳೆದ ಮೂರು ದಿನಗಳಿಂದ ಹೆಚ್.ಡಿ.ರೇವಣ್ಣ ಬಹಿರಂಗವಾಗಿ ಕಾಣಿಸಿಕೊಂಡಿಲ್ಲ. ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದ್ದು, ಎರಡನೇ ಪ್ರಕರಣದ ಬಳಿಕ ರೇವಣ್ಣಗೆ ನೋಟಿಸ್ ನೀಡಲಾಗಿದೆ.

ಗುರುವಾರ ಗೃಹಸಚಿವ ಜಿ ಪರಮೇಶ್ವರ್‌ ಅವರು ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ, ರೇವಣ್ಣ ಅವರು ವಿಚಾರಣೆಗೆ ಹಾಜರಾಗದಿದ್ದರೆ ಬಂಧನ ಮಾಡಬೇಕಾಗುತ್ತದೆ ಎಂದು ಹೇಳಿದ್ದರು. ಆದರೂ ಕೂಡ ರೇವಣ್ಣ ಅವರು ತನಿಖೆಗೆ ಹಾಜರಾಗದೆ ತಪ್ಪಿಸಿಕೊಂಡಿದ್ದಾರೆ. ಹಾಗಾಗಿ ನ್ಯಾಯಾಲಯ ನೋಟೀಸ್‌ ಜಾರಿ ಮಾಡಿದೆ ಎಂದು ಹೇಳಲಾಗುತ್ತಿದೆ.

ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹಾರಿದ್ದಾರೆ. ಜರ್ಮನಿಯಲ್ಲಿ ಉಳಿದಿದ್ದಾರೆ ಎನ್ನಲಾಗಿತ್ತು. ನಂತರ ದುಬೈಗೆ ತೆರಳಿದ್ದಾರೆ ಎಂದು ವರದಿಯಾಗಿತ್ತು.

ಲೈಂಗಿಕ ದೌರ್ಜನ್ಯ ಆರೋಪಕ್ಕೆ ಹೊಂದಿಕೊಂಡ ಕ್ರಿಮಿನಲ್ ಪ್ರಕರಣದಲ್ಲಿ ಮಹಿಳೆಯೊಬ್ಬರ ಅಪಹರಣಕ್ಕೆ ಪ್ರತ್ಯೇಕ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಶಾಸಕ ಹೆಚ್.ಡಿ.ರೇವಣ್ಣ ಸಲ್ಲಿಸಿದ್ದ ಮಧ್ಯಂತರ ಜಾಮೀನು ಮಂಜೂರಾತಿ ಕೋರಿಕೆಯನ್ನು ಶನಿವಾರ (ಮೇ 4) ಆಲಿಸಿ ಆದೇಶ ಪ್ರಕಟಿಸುವುದಾಗಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಿಳಿಸಿದೆ.

Read More
Next Story