ಅಪ್ಪು ಅಭಿನಯದ ʻಅಂಜನಿ ಪುತ್ರʼ ಸಿನಿಮಾ ರೀರಿಲೀಸ್!
x
ಅಂಜನಿಪುತ್ರ ಸಿನಿಮಾ ಮರುಬಿಡುಗಡೆಯಾಗಲಿದೆ.

ಅಪ್ಪು ಅಭಿನಯದ ʻಅಂಜನಿ ಪುತ್ರʼ ಸಿನಿಮಾ ರೀರಿಲೀಸ್!

ಪವರ್‌ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌, ರಶ್ಮಿಕಾ ಮಂದಣ್ಣ, ಮುಖ್ಯಭೂಮಿಕೆಯಲ್ಲಿ ನಟಿಸಿದ್ದ ಅಂಜನಿ ಪುತ್ರ ಸಿನಿಮಾ ಮರು ಬಿಡುಗಡೆಯಾಗುತ್ತಿದೆ.


Click the Play button to hear this message in audio format

ಪವರ್‌ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌, ರಶ್ಮಿಕಾ ಮಂದಣ್ಣ ಮುಖ್ಯಭೂಮಿಕೆಯಲ್ಲಿ ನಟಿಸಿದ್ದ ಅಂಜನಿ ಪುತ್ರ ಸಿನಿಮಾ ಇದೀಗ ಮರು ಬಿಡುಗಡೆ ಆಗುತ್ತಿದೆ. ಮೇ 10ರಂದು ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ.

ಈ ಸಿನಿಮಾವನ್ನು ಎ ಹರ್ಷ ನಿರ್ದೇಶಿಸಿದ್ದು, ಎಂಎನ್ ಕುಮಾರ್ ನಿರ್ಮಿಸಿದ್ದಾರೆ. 2017ರ ಡಿಸೆಂಬರ್ 21ರಂದು ಚಿತ್ರ ಬಿಡುಗಡೆಯಾಗಿತ್ತು. ಚಿತ್ರದಲ್ಲಿ ಪವರ್ ಸ್ಟಾರ್ ಜೊತೆಗೆ ರಶ್ಮಿಕಾ ಮಂದಣ್ಣ ನಾಯಕಿಯಾಗಿದ್ದಾರೆ.

ರವಿ ಬಸ್ರೂರ್ ಈ ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದರು. ಚಿತ್ರದಲ್ಲಿ ರಮ್ಯಾ ಕೃಷ್ಣ, ರವಿಶಂಕರ್, ಮುಖೇಶ್ ತಿವಾರಿ ಮತ್ತು ಇತರರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಸ್ವಾಮಿ ಚಿತ್ರದ ಛಾಯಾಗ್ರಾಹಕರು.

Read More
Next Story