50 ದಿನ ಪೂರೈಸಿದ “ಬ್ಲಿಂಕ್‌”  ಸಿನಿಮಾ
x
“ಬ್ಲಿಂಕ್‌” ಸಿನಿಮಾ ಅಮೆಜಾನ್ ಒಟಿಟಿಯಲ್ಲಿ ಬಿಡುಗಡೆಯಾಗಿದ್ದು, ಉತ್ತಮ ಪ್ರತಿಕ್ರಿಯೆಯನ್ನು ಪಡೆದುಕೊಳ್ಳುತ್ತಿದೆ.

50 ದಿನ ಪೂರೈಸಿದ “ಬ್ಲಿಂಕ್‌” ಸಿನಿಮಾ

ಕನ್ನಡ ಸಿನಿಮಾಗಳನ್ನು ಪ್ರೇಕ್ಷಕರು ನೋಡುತ್ತಿಲ್ಲ ಎಂಬ ಅಪವವಾದದ ನಡುವೆ ಶ್ರೀನಿಧಿ ಬೆಂಗಳೂರು ನಿರ್ದೇಶನದ ಟೈಮ್‌ ಟ್ರಾವೆಲ್‌ ಸಿನಿಮಾ “ಬ್ಲಿಂಕ್‌” ಯಶಸ್ವಿಯಾಗಿ 50 ದಿನ ಪೂರೈಸಿದೆ.


Click the Play button to hear this message in audio format

ಕನ್ನಡ ಸಿನಿಮಾಗಳನ್ನು ಪ್ರೇಕ್ಷಕರು ನೋಡುತ್ತಿಲ್ಲ ಎಂಬ ಅಪವವಾದದ ನಡುವೆ ಶ್ರೀನಿಧಿ ಬೆಂಗಳೂರು ನಿರ್ದೇಶನದ ಟೈಮ್‌ ಟ್ರಾವೆಲ್‌ ಸಿನಿಮಾ “ಬ್ಲಿಂಕ್‌” ಯಶಸ್ವಿಯಾಗಿ 50 ದಿನ ಪೂರೈಸಿದೆ.

“ಬ್ಲಿಂಕ್‌” ಸಿನಿಮಾ ಅಮೆಜಾನ್ ಒಟಿಟಿಯಲ್ಲಿ ಬಿಡುಗಡೆಯಾಗಿದ್ದು, ಉತ್ತಮ ಪ್ರತಿಕ್ರಿಯೆಯನ್ನು ಪಡೆದುಕೊಳ್ಳುತ್ತಿದೆ. ಜನರು ಈ ಸಿನಿಮಾಗೆ ಸಾಮಾಜಿಕ ಜಾಲತಾಣಗಳಲ್ಲಿ ಉತ್ತಮ ಪ್ರತಿಕ್ರಿಯೆಯನ್ನು ವ್ಯಕ್ತಪಡಿಸುತ್ತಿದ್ದಾರೆ.

ಈ ಸಂತಸವನ್ನು ಹಂಚಿಕೊಳ್ಳಲು ಚಿತ್ರತಂಡ ಬೆಂಗಳೂರಿನ ಖಾಸಗಿ ಹೋಟೆಲ್‌ವೊಂದರಲ್ಲಿ ಸುದ್ದಿಗೋಷ್ಟಿ ನಡೆಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚಿತ್ರದ ನಿರ್ಮಾಪಕ ರವಿಚಂದ್ರ ಎ ಜೆ, ʻʻಸಿನಿಮಾ ಈ ಲೆವೆಲ್‌ಗೆ ಆಗುತ್ತದೆ ಎಂದು ಅಂದುಕೊಂಡಿರಲಿಲ್ಲ. ಮನೆಯವರು ಖುಷಿಯಾಗಿದ್ದಾರೆ. ಇಡೀ ಸಿನಿಮಾ ತಂಡ ಪ್ರಾಮಾಣಿಕವಾಗಿ ದುಡಿದಿದೆ. ಅವರಿಗೆಲ್ಲಾ ಮುಂದೆ ಒಳ್ಳೆ ಸಿನಿ ಕರಿಯರ್ ಸಿಗಬೇಕು. ಆದಷ್ಟು ಬೇಗ ತೆಲುಗಿಗೂ ಡಬ್ ಮಾಡಿಸುತ್ತೇವೆ. ತಮಿಳು ಡಬ್ ಬಗ್ಗೆ ಚರ್ಚೆ ನಡೆಸಲಾಗಿದೆ. ಈ ಸಿನಿಮಾಗೆ ಭಾಷೆಯ ಎಲ್ಲೆ ಇಲ್ಲʼʼ ಎಂದರು.

ನಟ ದೀಕ್ಷಿತ್ ಶೆಟ್ಟಿ ಮಾತನಾಡಿ, ʻʻಬಹಳ ಖುಷಿಯಾಗುತ್ತಿದೆ. ಎಷ್ಟೋ ವರ್ಷಗಳ ನಂತರ ಹೊಸಬರ ತಂಡ 50 ದಿನಗಳ ಕಾಲ ಸಿನಿಮಾವನ್ನು ಥಿಯೇಟರ್‌ನಲ್ಲಿ ಉಳಿಸಿಕೊಂಡಿದ್ದೇವೆ. ನಮಗೆ ನಂಬಲು ಆಗುತ್ತಿಲ್ಲ. ಮೊದಲ ದಿನದಿಂದ ಇಲ್ಲಿವರೆಗೂ ಬಹಳಷ್ಟು ಹೋರಾಟ ಮಾಡಿದ್ದೇವು. ನಾವು ಜನರನ್ನು ಕರೆದುಕೊಂಡು ಥಿಯೇಟರ್ ತುಂಬಿಸುತ್ತಿದ್ದೇವೆ ಎಂದು ಒಂದಷ್ಟು ಜನ ಮಾತಾನಾಡಿಕೊಂಡರು. ಹಾಗೇ ಹೇಳಿದವರಿಗೆ ಉತ್ತರ 50 ದಿನ. ಸಿನಿಮಾ ಅಷ್ಟು ಕೋಟಿ ಮಾಡಬೇಕು. ಇಷ್ಟು ಕೋಟಿ ಮಾಡಬೇಕು ಎನ್ನುವುದು ನನ್ನ ತಲೆಯಲ್ಲಿ ಇರಲಿಲ್ಲ. ನಿರ್ಮಾಪಕರು ಗೆಲ್ಲಬೇಕು. ನಿಲ್ಲಬೇಕು ಅನ್ನುವುದಷ್ಟೇ ಇತ್ತು. ಹಾಕಿದ ಬಂಡವಾಳ ವಾಪಸ್ ಬರುವುದರಲ್ಲಿದೆ. ಹೀಗಾಗಿ ಖುಷಿ ಇದೆ ಎಂದು ಭಾವಿಸಿದ್ದೇನೆ. ಈ ಗೆಲುವಿಗೆ ಕಾರಣರಾದ ಇಡೀ ತಂಡಕ್ಕೆ ಧನ್ಯವಾದʼʼ ತಿಳಿಸಿದರು.

ಥಿಯೇಟರ್‌ನಲ್ಲಿಯೂ ಮೆಚ್ಚುಗೆ ಪಡೆದಿದ್ದ ಬ್ಲಿಂಕ್ ಸಿನಿಮಾ ಅಮೇಜಾನ್ ಪ್ರೈಮ್ ಗೆ ಎಂಟ್ರಿ ಕೊಟ್ಟು 3 ದಿನದಲ್ಲಿಯೇ 7 ಮಿಲಿಯನ್ಸ್ ಮಿನಿಟ್ ಸ್ಟ್ರೀಮಿಂಗ್ ಕಾಣುವ ಮೂಲಕ ಹೊಸ ದಾಖಲೆ ಸೃಷ್ಟಿಸಿದ್ದು, 4ನೇ ದಿನ 10 ಮಿಲಿಯನ್ ಮಿನಿಟ್ಸ್ ರೀಚ್ ಆಗಿದೆ.

‘ಬ್ಲಿಂಕ್’ ಚಿತ್ರಕ್ಕೆ ಶ್ರೀನಿಧಿ ಬೆಂಗಳೂರು ಆಕ್ಷನ್ ಕಟ್ ಹೇಳಿದ್ದಾರೆ. ರವಿಚಂದ್ರ ಎ.ಜೆ. ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ. ‘ದಿಯಾ’ ಖ್ಯಾತಿಯ ದೀಕ್ಷಿತ್ ಶೆಟ್ಟಿ ಅವರು ಈ ಚಿತ್ರದಲ್ಲಿ ಮುಖ್ಯಭೂಮಿಕೆಯಲ್ಲಿದ್ದಾರೆ. ಚೈತ್ರಾ ಆಚಾರ್, ಗೋಪಾಲ್ ದೇಶಪಾಂಡೆ ಸೇರಿದಂತೆ ಹಲವರು ಸಿನಿಮಾದಲ್ಲಿ ನಟಿಸಿದ್ದಾರೆ.

Read More
Next Story