Blink on OTT: ದೀಕ್ಷಿತ್‌ ಶೆಟ್ಟಿ‌ ನಟನೆಯ ಸಿನಿಮಾಕ್ಕೆ ಪ್ರೇಕ್ಷಕರಿಂದ ಮೆಚ್ಚುಗೆ
x
ದೀಕ್ಷಿತ್‌ ಶೆಟ್ಟಿ‌ ನಟನೆಯ ಸಿನಿಮಾಕ್ಕೆ ಪ್ರೇಕ್ಷಕರಿಂದ ಮೆಚ್ಚುಗೆ

Blink on OTT: ದೀಕ್ಷಿತ್‌ ಶೆಟ್ಟಿ‌ ನಟನೆಯ ಸಿನಿಮಾಕ್ಕೆ ಪ್ರೇಕ್ಷಕರಿಂದ ಮೆಚ್ಚುಗೆ

ಅಮೆಜಾನ್‌ ಪ್ರೈಮ್‌ ವಿಡಿಯೋದಲ್ಲಿ ಕೆಲವು ದಿನಗಳ ಹಿಂದೆ ಬ್ಲಿಂಕ್‌ ಕನ್ನಡ ಸಿನಿಮಾ ಬಿಡುಗಡೆಯಾಗಿತ್ತು. ಭಾರತ ಹೊರತುಪಡಿಸಿ ಅಮೆರಿಕ, ಇಂಗ್ಲೆಂಡ್‌ನಲ್ಲಿ ಬ್ಲಿಂಕ್‌ ಸಿನಿಮಾವನ್ನು ರಿಲೀಸ್‌ ಮಾಡಲಾಗಿತ್ತು.


Click the Play button to hear this message in audio format

ಅಮೆಜಾನ್‌ ಪ್ರೈಮ್‌ ವಿಡಿಯೋದಲ್ಲಿ ಕೆಲವು ದಿನಗಳ ಹಿಂದೆ ಬ್ಲಿಂಕ್‌ ಕನ್ನಡ ಸಿನಿಮಾ ಬಿಡುಗಡೆಯಾಗಿತ್ತು. ಭಾರತ ಹೊರತುಪಡಿಸಿ ಅಮೆರಿಕ, ಇಂಗ್ಲೆಂಡ್‌ನಲ್ಲಿ ಬ್ಲಿಂಕ್‌ ಸಿನಿಮಾವನ್ನು ರಿಲೀಸ್‌ ಮಾಡಲಾಗಿತ್ತು. ಇದೀಗ ಅಮೆಜಾನ್‌ ಪ್ರೈಮ್‌ ಇಂಡಿಯಾದಲ್ಲೂ ಬ್ಲಿಂಕ್‌ ಬಿಡುಗಡೆಯಾಗಿದೆ. ಭಾರತದ ಒಟಿಟಿ ವೀಕ್ಷಕರು ಈ ಸಿನಿಮಾ ನೋಡಿ ಸೋಷಿಯಲ್‌ ಮೀಡಿಯಾದಲ್ಲಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಶಿವರಾತ್ರಿ ಹಬ್ಬದಂದು ಸೂಪರ್ ಸ್ಟಾರ್ಸ್ ಸಿನಿಮಾಗಳ ಮಧ್ಯೆ ತೆರೆಗೆ ಬಂದ ‘ಬ್ಲಿಂಕ್’ ಸಿನಿಮಾಗೆ ಪ್ರಾರಂಭದಲ್ಲಿ ಅಷ್ಟಾಗಿ ಉತ್ತಮ ಪ್ರತಿಕ್ರಿಯೆ ಸಿಕ್ಕಿರಲಿಲ್ಲ. ಆರಂಭದ ದಿನಗಳಲ್ಲಿ ಸಿನಿಮಾ ನೋಡಿದ ಪ್ರೇಕ್ಷಕರು, ಸಿನಿಮಾದ ಬಗ್ಗೆ ವ್ಯಕ್ತವಾದ ಸದಭಿಪ್ರಾಯದಿಂದಾಗಿ ‘ಬ್ಲಿಂಕ್’ ಶೋಗಳು ಏರಿಕೆಯಾಗುತ್ತಾ ಹೋದವು. ಕನ್ನಡ ಸಿನಿಮಾಗಳಿಗೆ ಸ್ಕ್ರೀನ್ ಸಿಕ್ತಿಲ್ಲ ಎಂಬ ಆಪವಾದದ ನಡುವೆ 8 ಶೋಗಳಿಂದ 82 ಶೋ ಬ್ಲಿಂಕ್ ಪಾಲಾಗಿದೆ ಎಂಬುದು ಚಿತ್ರತಂಡದ ಹೆಮ್ಮೆ.

‘ಬ್ಲಿಂಕ್’ ಸಿನಿಮಾಕ್ಕೆ ಚಿತ್ರರಂಗದ ಕೆಲವು ಪ್ರಮುಖ ನಟ, ನಟಿಯರು ಸಹ ಬೆಂಬಲ ವ್ಯಕ್ತಪಡಿಸಿದರು. ಸಿನಿಮಾಗೆ ಸಿಗುತ್ತಿರುವ ಉತ್ತಮ ಪ್ರತಿಕ್ರಿಯೆ, ಸಿನಿಮಾದ ಬಗ್ಗೆ ಕೇಳಿ ಬಂದ ಉತ್ತಮ ವಿಮರ್ಶೆಗಳನ್ನು ಗಮನಿಸಿ ಸ್ವತಃ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ‘ಬ್ಲಿಂಕ್’ ಸಿನಿಮಾ ನೋಡುವ ಇಂಗಿತ ವ್ಯಕ್ತಪಡಿಸಿದ್ದರು. ಇನ್ನುಳಿದಂತೆ ಸಿಂಪಲ್ ಸುನಿ, ನವೀನ್ ಶಂಕರ್, ರುಕ್ಮಿಣಿ ವಸಂತ್ ಹಾಗೂ ನಟಿ ಬೃಂದಾ ಆಚಾರ್ ಸೇರಿದಂತೆ ಹಲವಾರು ಕನ್ನಡ ತಾರೆಯರು ‘ಬ್ಲಿಂಕ್’ ಗೆ ಬಹುಪರಾಕ್ ಎಂದಿದ್ದರು.

ಶ್ರೀನಿಧಿ ಬೆಂಗಳೂರು ನಿರ್ದೇಶನದ ‘ಬ್ಲಿಂಕ್’ ಚಿತ್ರಕ್ಕೆ ರವಿಚಂದ್ರ ಎ. ಜೆ ಬಂಡವಾಳ ಹೂಡಿದ್ದಾರೆ. ‘ದಿಯಾ’ ಖ್ಯಾತಿಕ ದೀಕ್ಷಿತ್ ಶೆಟ್ಟಿ, ಚೈತ್ರಾ ಆಚಾರ್, ಗೋಪಾಲ ದೇಶಪಾಂಡೆ ಸೇರಿದಂತೆ ಹಲವರು ತಾರಾಬಳಗದಲ್ಲಿದ್ದಾರೆ. ಈ ಸಿನಿಮಾ ಭಿನ್ನವಾದ ಕತೆ ಹೊಂದಿದೆ. ಟೈಮ್ ಲೂಪ್, ಟೈಮ್ ಟ್ರಾವೆಲ್ ಕಾನ್ಸೆಪ್ಟ್​ ಹೊಂದಿರುವ ಸಿನಿಮಾ ಇದಾಗಿದೆ.

Read More
Next Story