ಏಪ್ರಿಲ್‌ 18 ಮತ್ತು 19ರಂದು ಸಿಇಟಿ
x
ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಏಪ್ರಿಲ್‌ 18 ಮತ್ತು 19ರಂದು ನಡೆಯಲಿದೆ.

ಏಪ್ರಿಲ್‌ 18 ಮತ್ತು 19ರಂದು ಸಿಇಟಿ

ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆ ಏಪ್ರಿಲ್‌ 18 ಮತ್ತು 19ರಂದು ನಡೆಯಲಿದೆ.


Click the Play button to hear this message in audio format

ಬೆಂಗಳೂರು: ಪ್ರಸಕ್ತ ಸಾಲಿನ ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಏಪ್ರಿಲ್‌ 18 ಮತ್ತು 19ರಂದು ನಡೆಯಲಿದೆ.

ಸಿಇಟಿ-24 ಬರೆಯಲು 3.27 ಲಕ್ಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ಸಲ್ಲಿಸುವಾಗ ತಪ್ಪು ಪರೀಕ್ಷಾ ಕೇಂದ್ರಗಳ ನಮೂದು, ಪರೀಕ್ಷಾ ಶುಲ್ಕ ಪಾವತಿ ವಿಳಂಬದ ಕಾರಣದಿಂದ ಹಲವು ಅಭ್ಯರ್ಥಿಗಳು ಮಂಗಳವಾರವೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಚೇರಿಗೆ ಭೇಟಿ ನೀಡಿ, ತಪ್ಪು ಸರಿಪಡಿಸುವ, ಡಿ.ಡಿಗಳನ್ನು ನೀಡಿ ಶುಲ್ಕ ಪಾವತಿ ಸಕ್ರಮಗೊಳಿಸಿಕೊಳ್ಳುವ ಪ್ರಕ್ರಿಯೆಯಲ್ಲಿ ತೊಡಗಿದ್ದರು.

ಎಲ್ಲ ಪರೀಕ್ಷಾ ಕೇಂದ್ರಗಳಲ್ಲೂ ಸಿ.ಸಿ.ಟಿ.ವಿ. ಕ್ಯಾಮೆರಾ ಅಳವಡಿಸಲಾಗಿದ್ದು, ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಪರೀಕ್ಷಾ ಸಮಯ ಬೆಳಗ್ಗೆ 10:30 ರಿಂದ 11:50 ಹಾಗೂ 2:30 ರಿಂದ 3.50ರವರೆಗೆ ಇದ್ದು, ಜೀವಶಾಸ್ತ್ರ, ಗಣಿತ (ಏ.18), ಭೌತಶಾಸ್ತ್ರ, ರಸಾಯನಶಾಸ್ತ್ರ (ಏ.19) ಪರೀಕ್ಷೆ ಇರಲಿದೆ.

ನೀಲಿ ಅಥವಾ ಕಪ್ಪು ಬಾಲ್ ಪಾಯಿಂಟ್ ಪೆನ್ನು, ಪ್ರವೇಶಪತ್ರದ ಜತೆಗೆ ಭಾವಚಿತ್ರ ಇರುವ ಒಂದು ಗುರುತುಪತ್ರ (ಆಧಾರ್, ಪಾನ್ ಇತ್ಯಾದಿ) ತೆಗೆದುಕೊಂಡು ಹೋಗಬೇಕು. ಪರೀಕ್ಷೆ ಆರಂಭಕ್ಕೂ ಮೊದಲು ಕೇಂದ್ರದಲ್ಲಿರಬೇಕು. ಇನ್ನು ಕೈ ಗಡಿಯಾರ, ಮೊಬೈಲ್ ಫೋನ್, ಟ್ಯಾಬ್ಲೆಟ್, ಕ್ಯಾಲ್ಕುಲೇಟರ್, ಬ್ಲೂಟೂಥ್ ಮುಂತಾದವುಗಳನ್ನು ಪರೀಕ್ಷಾ ಕೇಂದ್ರಕ್ಕೆ ಕೊಂಡೊಯ್ಯವಂತಿಲ್ಲ ಎಂದು ಪ್ರಕಟಣೆ ತಿಳಿಸಿದೆ.

Read More
Next Story