ಬಹು ನಿರೀಕ್ಷಿತ ʼಛೂ ಮಂತರ್ʼ ಮೇ 10ರಂದು ತೆರೆಗೆ
x
ಛೂ ಮಂತರ್ ಸಿನಿಮಾ ಮೇ 10ರಂದು ಬಿಡುಗಡೆಯಾಗಲಿದೆ.

ಬಹು ನಿರೀಕ್ಷಿತ ʼಛೂ ಮಂತರ್ʼ ಮೇ 10ರಂದು ತೆರೆಗೆ

ಶರಣ್‌ ಅಭಿನಯದ ಬಹುನಿರೀಕ್ಷಿತ ಹಾರರ್-ಕಾಮಿಡಿ ಸಿನಿಮಾ “ಛೂ ಮಂತರ್” ಮೇ 10ರಂದು ಬಿಡುಗಡೆಯಾಗಲಿದೆ.


Click the Play button to hear this message in audio format

ಶರಣ್‌ ಅಭಿನಯದ ಬಹುನಿರೀಕ್ಷಿತ ಹಾರರ್-ಕಾಮಿಡಿ ಸಿನಿಮಾ ʼಛೂ ಮಂತರ್ʼ ಏಪ್ರಿಲ್‌ ಮೊದಲ ವಾರದಲ್ಲಿ ಬಿಡುಗಡೆ ಮಾಡಲು ಯೋಜನೆ ಹಾಕಲಾಗಿತ್ತು. ಆದರೆ ಇದೀಗ ಹೊಸ ದಿನಾಂಕವನ್ನು ಚಿತ್ರತಂಡ ಬಿಡುಗಡೆ ಮಾಡಿದ್ದು, ಸಿನಿಮಾ ಮೇ 10ರಂದು ಬಿಡುಗಡೆಯಾಗಲಿದೆ ಎಂದು ಹೇಳಿದೆ.

ನವನೀತ್ ನಿರ್ದೇಶನದಲ್ಲಿ ಶರಣ್ ಅವರ ಪಾತ್ರವು ಹಿಂದಿನ ಪಾತ್ರಗಳಿಗಿಂತ ಭಿನ್ನವಾದ ಒಂದು ಹೊಸ ವ್ಯಕ್ತಿತ್ವದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇತ್ತೀಚೆಗಷ್ಟೇ ಉಪಾಧ್ಯಕ್ಷ ಚಿತ್ರದ ಮೂಲಕ ಯಶಸ್ಸು ಕಂಡಿದ್ದ ಚಿಕ್ಕಣ್ಣ, ಚೂಮಂತರ್ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ.

ತರುಣ್ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ಮಾನಸ ತರುಣ್ ಮತ್ತು ತರುಣ್ ಶಿವಪ್ಪ ನಿರ್ಮಿಸಿರುವ ಈ ಚಿತ್ರದ ಶೀರ್ಷಿಕೆ ಹಾಡು ಈಗಾಗಲೇ ಬಿಡುಗಡೆಯಾಗಿದೆ. ಚಿತ್ರಕ್ಕೆ ಚಂದನ್ ಶೆಟ್ಟಿ ಸಂಗೀತ ಸಂಯೋಜಿಸಿದ್ದು, ಅವಿನಾಶ್ ಆರ್ ಬಸುತ್ಕರ್ ಹಿನ್ನೆಲೆ ಸಂಗೀತ ನೀಡಿದ್ದಾರೆ. ಅನುಪ್ ಕಟ್ಟುಕರನ್ ಛಾಯಾಗ್ರಹಣ ಮಾಡಿದ್ದು, ವೆಂಕಿ ಯುಡಿವಿ ಸಂಕಲನ ಮಾಡಿದ್ದಾರೆ.

ಚಿತ್ರದಲ್ಲಿ ಮೇಘನಾ ಗಾಂವ್ಕರ್ , ಅದಿತಿ ಪ್ರಭುದೇವ, ಪ್ರಭು ಮುಂಡ್ಕೂರ್, ಮತ್ತು ರಜಿನಿ ಭಾರದ್ವಾಜ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

Read More
Next Story