ಜಪಾನ್ ನಲ್ಲಿ ಬಿಡುಗಡೆಯಾಗಲಿದೆ ರಕ್ಷಿತ್‌ ಶೆಟ್ಟಿ ಅಭಿನಯದ ಚಾರ್ಲಿ 777
x
ಜೂನ್‌ 28ರಂದು ಜಪಾನ್‌ನಲ್ಲಿ ಬಿಡುಗಡೆಯಾಗಲಿದೆ.

ಜಪಾನ್ ನಲ್ಲಿ ಬಿಡುಗಡೆಯಾಗಲಿದೆ ರಕ್ಷಿತ್‌ ಶೆಟ್ಟಿ ಅಭಿನಯದ ಚಾರ್ಲಿ 777

ರಕ್ಷಿತ್ ಶೆಟ್ಟಿ ಅಭಿನಯದ ಕನ್ನಡ ಚಿತ್ರ ಚಾರ್ಲಿ 777 ಸಿನಿಮಾ ಜಪಾನ್ ನಲ್ಲೂ ಬಿಡುಗಡೆಗೆ ಸಜ್ಜಾಗಿದೆ.


Click the Play button to hear this message in audio format

ರಕ್ಷಿತ್ ಶೆಟ್ಟಿ ಅಭಿನಯದ ಕನ್ನಡ ಚಿತ್ರ ʼಚಾರ್ಲಿ 777ʼ ಸಿನಿಮಾ ಜಪಾನ್ ನಲ್ಲೂ ಬಿಡುಗಡೆಗೆ ಸಜ್ಜಾಗಿದೆ.

ರಕ್ಷಿತ್ ಶೆಟ್ಟಿ ಅಭಿನಯದ, ಕಿರಣ್ ರಾಜ್ ನಿರ್ದೇಶನದ ರಾಷ್ಟ್ರ ಪ್ರಶಸ್ತಿ ವಿಜೇತ ಚಾರ್ಲಿ 777 ಚಿತ್ರವು ಇದೇ ಜೂನ್ 28ರಂದು ಜಪಾನ್ ನಲ್ಲಿ ಬಿಡುಗಡೆಯಾಗಲಿದೆ. ನಿರ್ದೇಶಕ ಕಿರಣ್‌ ರಾಜ್ ನಿರ್ದೇಶನದಲ್ಲಿ 2022ರಲ್ಲಿ ಮೂಡಿಬಂದಿದ್ದ ಈ ಚಿತ್ರ ನಾಯಿ ಮತ್ತು ನಾಯಕ ನಡುವಿನ ಮನಮುಟ್ಟುವ ಕಥಾಹಂದರದೊಂದಿಗೆ ಅಭೂತಪೂರ್ವ ಯಶಸ್ಸು ಕಂಡಿತ್ತು.

ಸಿನಿಮಾ ವ್ಯವಹಾರ ವಿಶ್ಲೇಷಕ ತರಣ್ ಆದರ್ಶ್ ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮದಲ್ಲಿ ಈ ಕುರಿತು ಪೋಸ್ಟ್ ಮಾಡಿದ್ದು, ಜಪಾನಿ ಭಾಷೆಯಲ್ಲಿ '777 ಚಾರ್ಲಿ'ಯ ಪೋಸ್ಟರ್ ಅನ್ನು ಸಹ ಹಂಚಿಕೊಂಡಿದ್ದಾರೆ. ರಕ್ಷಿತ್ ಶೆಟ್ಟಿ ನಟಿಸಿರುವ ಮತ್ತು ಕಿರಣ್ ರಾಜ್ ನಿರ್ದೇಶನದ '777 ಚಾರ್ಲಿ' ಜೂನ್ 28, 2024ರಂದು ಜಪಾನ್‌ನಲ್ಲಿ ಬಿಡುಗಡೆಯಾಗಲಿದೆ ಎಂದು ಬರೆದುಕೊಂಡಿದ್ದಾರೆ.

Read More
Next Story