Jasprit Bumrah: ಟೆಸ್ಟ್ ಕ್ರಿಕೆಟ್‌ನಲ್ಲಿ ವೇಗದ 200 ವಿಕೆಟ್ ಗಳಿಸಿದ ಬುಮ್ರಾ; ಈ ಸಾಧನೆ ಮಾಡಿದ 2ನೇ ಬೌಲರ್ ಎಂಬ ಖ್ಯಾತಿ
Jasprit Bumrah: ಭೋಜನ ನಂತರದ ಸೆಷನ್‌ನಲ್ಲಿ ಅವರು ಟ್ರಾವಿಸ್ ಹೆಡ್ (1) ಅವರನ್ನು ಔಟ್ ಮಾಡಿದ ಬುಮ್ರಾ 200ನೇ ತಮ್ಮದಾಗಿಸಿಕೊಂಡರು. ಟೆಸ್ಟ್‌ನಲ್ಲಿ ವೇಗವಾಗಿ 200 ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ಜಡೇಜಾ ಅವರೊಂದಿಗೆ ಸೇರಿಕೊಂಡಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟದ ವೇಳೆ ಭಾರತದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಟೆಸ್ಟ್‌ನಲ್ಲಿ 200 ವಿಕೆಟ್ ಸಾಧನೆ ಮಾಡಿದ್ದಾರೆ. ಈ ಮೂಲಕ ರವೀಂದ್ರ ಜಡೇಜಾ ಅವರೊಂದಿಗೆ ಟೆಸ್ಟ್ ಕ್ರಿಕೆಟ್‌ನಲ್ಲಿ 200 ವಿಕೆಟ್ ಪಡೆದ ಎರಡನೇ ವೇಗದ ಭಾರತೀಯ ಬೌಲರ್ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಬುಮ್ರಾ ಮತ್ತು ಜಡೇಜಾ ಇಬ್ಬರೂ ತಮ್ಮ 44 ನೇ ಟೆಸ್ಟ್‌ನಲ್ಲಿ ಈ ಸಾಧನೆ ಮಾಡಿದ್ದಾರೆ. ಒಟ್ಟಾರೆಯಾಗಿ ಅವರು ಈ ಮೈಲಿಗಲ್ಲನ್ನು ಪೂರ್ಣಗೊಳಿಸಿದ 12 ನೇ ಭಾರತೀಯ ಬೌಲರ್ ಆಗಿದ್ದಾರೆ. ಭಾರತದ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ 37ನೇ ಟೆಸ್ಟ್ ಪಂದ್ಯದಲ್ಲಿ 200 ವಿಕೆಟ್ ಪಡೆದ ಭಾರತದ ವೇಗದ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಟೆಸ್ಟ್‌ನಲ್ಲಿ ಕ್ರಿಕೆಟ್‌ನಲ್ಲಿ ವೇಗವಾಗಿ 200 ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ಅಶ್ವಿನ್ ಮೂರನೇ ಸ್ಥಾನದಲ್ಲಿದ್ದರೆ. ಪಾಕಿಸ್ತಾನದ ಯಾಸಿರ್ ಶಾ (33 ಟೆಸ್ಟ್) ಮತ್ತು ಆಸ್ಟ್ರೇಲಿಯಾದ ಕ್ಲಾರಿ ಗ್ರಿಮ್ಮೆಟ್ (36 ಟೆಸ್ಟ್) ಅಗ್ರಸ್ಥಾನದಲ್ಲಿದ್ದಾರೆ.
ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಬುಮ್ರಾ ತಮ್ಮ ವಿಕೆಟ್‌ಗಳ ಸಂಖ್ಯೆಯನ್ನು 28ಕ್ಕೆ ಏರಿಸಿದ್ದಾರೆ. ಅದಕ್ಕಾಗಿ ಅವರು ಮಿಚೆಲ್ ಮಾರ್ಷ್ ಅವರನ್ನು ಔಟ್ ಮಾಡಿದರು. ಇದಕ್ಕೂ ಮುನ್ನ ಆಸ್ಟ್ರೇಲಿಯಾದ ಎರಡನೇ ಇನ್ನಿಂಗ್ಸ್‌ನಲ್ಲಿ ಆರಂಭಿಕ ಬ್ಯಾಟ್ಸ್‌ಮನ್ ಸ್ಯಾಮ್ ಕೊಂಟಾಸ್ (8) ಅವರನ್ನು ಮೊದಲ ವಿಕೆಟ್‌ನಲ್ಲಿ ಔಟ್ ಮಾಡಿದ್ದರು.