Varun Chakravarthy: ಇಂಗ್ಲೆಂಡ್ ವಿರುದ್ಧ ಭಾರತ ಏಕದಿನ ತಂಡಕ್ಕೆ ವರುಣ್ ಚಕ್ರವರ್ತಿ ಆಯ್ಕೆ
Varun Chakravarthy: ಚಾಂಪಿಯನ್ಸ್ ಟ್ರೋಫಿ ತಂಡದಲ್ಲಿ ಈಗಾಗಲೇ ಅವಕಾಶ ಪಡೆದಿರುವ ನಾಲ್ವರು ಸ್ಪಿನ್ನರ್‌ಗಳಲ್ಲಿ ಒಬ್ಬರನ್ನು ಹೊರಕ್ಕಿಟ್ಟು ಚಕ್ರವರ್ತಿಗೆ ಅವಕಾಶ ನೀಡುವ ಸಾಧ್ಯತೆ ಇದೆ.
ಬೌಲಿಂಗ್‌ನಲ್ಲಿ ಅತ್ಯುತ್ತಮ ಫಾರ್ಮ್‌ನಲ್ಲಿರುವ ಮಿಸ್ಟರಿ ಸ್ಪಿನ್ನರ್ ವರುಣ್ ಚಕ್ರವರ್ತಿ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗಿದೆ. ಆರಂಭದಲ್ಲಿ ಅವರು ಅವಕಾಶ ಪಡೆದಿರಲಿಲ್ಲ. ಇತ್ತೀಚೆಗೆ ಮುಕ್ತಾಯಗೊಂಡ ಇಂಗ್ಲೆಂಡ್ ವಿರುದ್ಧದ ಟಿ–20 ಸರಣಿಯಲ್ಲಿ ಅಮೋಘ ಪ್ರದರ್ಶನದ ಮೂಲಕ ಗಮನ ಸೆಳೆದಿದ್ದ ಅವರನ್ನು ಏಕದಿನ ಸರಣಿಗೂ ಸೇರ್ಪಡೆಗೊಳಿಸಲಾಗಿದೆ.
ಚಾಂಪಿಯನ್ಸ್ ಟ್ರೋಫಿ ತಂಡದಲ್ಲಿ ಈಗಾಗಲೇ ಅವಕಾಶ ಪಡೆದಿರುವ ನಾಲ್ವರು ಸ್ಪಿನ್ನರ್‌ಗಳಲ್ಲಿ ಒಬ್ಬರನ್ನು ಹೊರಕ್ಕಿಟ್ಟು ಚಕ್ರವರ್ತಿಗೆ ಅವಕಾಶ ನೀಡುವ ಸಾಧ್ಯತೆ ಇದೆ. ಕುಲದೀಪ್ ಯಾದವ್ ಅಥವಾ ವಾಷಿಂಗ್ಟನ್ ಸುಂದರ್ ಅವರು ವರುಣ್‌ಗಾಗಿ ಅವಕಾಶ ಕಳೆದುಕೊಳ್ಳಬೇಕಾಗುತ್ತದೆ. ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯ ಪ್ರದರ್ಶನದ ಮೇಲೆ ಅದು ನಿರ್ಧಾರವಾಗಲಿದೆ ಎಂದು ವರದಿ ತಿಳಿಸಿದೆ.
ವರುಣ್ ಐದು ಟಿ20 ಪಂದ್ಯಗಳಲ್ಲಿ 14 ವಿಕೆಟ್‌ಗಳನ್ನು ಪಡೆದು ಸರಣಿ ಶ್ರೇಷ್ಠ ಪ್ರಶಸ್ತಿ ಗೆದ್ದಿರುವ ವರುಣ್ ಚಕ್ರವರ್ತಿ ಏಕದಿನ ತಂಡಕ್ಕೆ ಆಯ್ಕೆಯಾಗಿರಲಿಲ್ಲ. ಇದು ಕ್ರಿಕೆಟ್ ಪ್ರೇಮಿಗಳ ಕೋಪಕ್ಕೆ ಕಾರಣವಾಗಿತ್ತು. ಹೀಗಾಗಿ ಅವರನ್ನು ಇದೀಗ ಸೇರಿಸಿಕೊಳ್ಳಲಾಗಿದೆ.
ಚಕ್ರವರ್ತಿ ಮಂಗಳವಾರ(ಫೆ.04) ನೆಟ್ಸ್‌ನಲ್ಲಿ ವರುಣ್ ತರಬೇತಿ ಮತ್ತು ಬೌಲಿಂಗ್ ಅಭ್ಯಾಸ ಮಾಡುತ್ತಿದ್ದದ್ದು ಕಂಡುಬಂದಿತ್ತು. ಆಗಲೇ ಅವರು ತಂಡಕ್ಕೆ ಸೇರುವುದು ಖಾತರಿಯಾಗಿತ್ತು.
‘ಹೌದು, ವರುಣ್ ಚಕ್ರವರ್ತಿ ತಂಡ ಸೇರಿಕೊಂಡಿದ್ದಾರೆ’ಎಂದು ಅಭ್ಯಾಸದ ಬಳಿಕ ತಂಡದ ಉಪನಾಯಕ ಶುಭಮನ್ ಗಿಲ್ ಮಾಧ್ಯಮ ಪ್ರತಿನಿಧಿಗಳ ಜೊತೆಗಿನ ಸಂವಾದದಲ್ಲಿ ಖಚಿತಪಡಿಸಿದ್ದರು.
ಇಂಗ್ಲೆಂಡ್ ವಿರುದ್ಧದ ಮುಂಬರುವ ಮೂರು ಪಂದ್ಯಗಳ ಏಕದಿನ ಸರಣಿಗೆ ವರುಣ್ ಚಕ್ರವರ್ತಿ ಅವರನ್ನು ಆಯ್ಕೆ ಸಮಿತಿಯು ಆಯ್ಕೆ ಮಾಡಿದೆ ಎಂದು ಪ್ರಕಟಣೆ ತಿಳಿಸಿದೆ.
ಏಕದಿನ ಸರಣಿಗೆ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್ (ಉಪ ನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಲ್. ರಾಹುಲ್, ರಿಷಬ್ ಪಂತ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜ, ವಾಷಿಂಗ್ಟನ್ ಸುಂದರ್ , ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್. ಶಮಿ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ