Rohit Sharma: Rohit Sharma announces retirement from Test cricket
x

ರೋಹಿತ್ ಶರ್ಮಾ.

Rohit Sharma : ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ರೋಹಿತ್ ಶರ್ಮಾ

ರೋಹಿತ್​ 2024ರ ಟಿ20 ವಿಶ್ವ ಕಪ್​ ಬಳಿಕ ಆ ಮಾದರಿಯೂ ವಿದಾಯ ಘೋಷಿಸಿದ್ದರು. ಹೀಗಾಗಿ ಅವರು ಇನ್ನು ಮುಂದೆ ಏಕ ದಿನ ಕ್ರಿಕೆಟ್​ನಲ್ಲಿ ಮಾತ್ರ ಕಾಣಿಸಿಕೊಳ್ಳಲಿದ್ದಾರೆ. ಅದೇ ರೀತಿ ಅವರು ತಂಡದ ನಾಯಕರಾಗಿದ್ದ ಕಾರಣ ಹೊಸ ನಾಯಕನಿಗಾಗಿ ಹುಡುಕಾಟ ನಡೆಸಬೇಕಾಗಿದೆ.


ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅವರು ಮೇ 7ರ ಬುಧವಾರ ಟೆಸ್ಟ್ ಕ್ರಿಕೆಟ್‌ನಿಂದ ತಕ್ಷಣದಿಂದಲೇ ನಿವೃತ್ತಿ ಘೋಷಿಸಿದ್ದಾರೆ. ಇದರೊಂದಿಗೆ ಅವರ ಟೆಸ್ಟ್ ಭವಿಷ್ಯದ ಬಗ್ಗೆ ಇದ್ದ ಎಲ್ಲಾ ಊಹಾಪೋಹಗಳಿಗೆ ತೆರೆ ಬಿದ್ದಿದೆ. ಪ್ರಸ್ತುತ ಐಪಿಎಲ್ 2025ರಲ್ಲಿ ಮುಂಬೈ ಇಂಡಿಯನ್ಸ್ (MI) ತಂಡದಲ್ಲಿ ಆಡುತ್ತಿರುವ ರೋಹಿತ್, ತಮ್ಮ ನಿವೃತ್ತಿ ನಿರ್ಧಾರವನ್ನು ಬುಧವಾರ ಸಂಜೆ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಪ್ರಕಟಿಸಿದ್ದಾರೆ.

ರೋಹಿತ್ ತಮ್ಮ ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ, "ಎಲ್ಲರಿಗೂ ನಮಸ್ಕಾರ, ನಾನು ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸುತ್ತಿದ್ದೇನೆ ಎಂಬ ಮಾಹಿತಿ ಹಂಚಿಕೊಳ್ಳಲು ಇಚ್ಛಿಸುತ್ತೇನೆ. ಬಿಳಿ ಜರ್ಸಿಯಲ್ಲಿ ದೇಶವನ್ನು ಪ್ರತಿನಿಧಿಸುವುದು ನನಗೆ ಸಂಪೂರ್ಣ ಗೌರವವಾಗಿತ್ತು. ವರ್ಷಗಳಿಂದ ನೀಡಿದ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾದಗಳು. ನಾನು ಏಕದಿನ ಕ್ರಿಕೆಟ್‌ನಲ್ಲಿ ಭಾರತವನ್ನು ಪ್ರತಿನಿಧಿಸುವುದನ್ನು ಮುಂದುವರಿಸುತ್ತೇನೆ," ಎಂದು ಬರೆದಿದ್ದಾರೆ.

ರೋಹಿತ್​ 2024ರ ಟಿ20 ವಿಶ್ವ ಕಪ್​ ಬಳಿಕ ಆ ಮಾದರಿಯೂ ವಿದಾಯ ಘೋಷಿಸಿದ್ದರು. ಹೀಗಾಗಿ ಅವರು ಇನ್ನು ಮುಂದೆ ಏಕ ದಿನ ಕ್ರಿಕೆಟ್​ನಲ್ಲಿ ಮಾತ್ರ ಕಾಣಿಸಿಕೊಳ್ಳಲಿದ್ದಾರೆ. ಅದೇ ರೀತಿ ಅವರು ತಂಡದ ನಾಯಕರಾಗಿದ್ದ ಕಾರಣ ಹೊಸ ನಾಯಕನಿಗಾಗಿ ಹುಡುಕಾಟ ನಡೆಸಬೇಕಾಗಿದೆ.

ರೋಹಿತ್‌ ದಾಖಲೆ

38 ವರ್ಷದ ರೋಹಿತ್ ಶರ್ಮಾ ಅವರು ತಮ್ಮ ವೃತ್ತಿಜೀವನದ ಎರಡನೇ ಅವಧಿಯಲ್ಲಿ ಭಾರತದ ಅತ್ಯಂತ ಯಶಸ್ವಿ ಟೆಸ್ಟ್ ಬ್ಯಾಟ್ಸ್‌ಮನ್ ಆಗಿದ್ದರು. ಅವರು 67 ಟೆಸ್ಟ್ ಪಂದ್ಯಗಳಲ್ಲಿ 4301 ರನ್‌ಗಳನ್ನು ಗಳಿಸಿದ್ದು, 12 ಶತಕಗಳು ಮತ್ತು 18 ಅರ್ಧಶತಕಗಳೊಂದಿಗೆ 40.57ರ ಸರಾಸರಿಯನ್ನು ಹೊಂದಿದ್ದಾರೆ.

ರೋಹಿತ್ ಅವರು ಭಾರತ ತಂಡವನ್ನು ಆಸ್ಟ್ರೇಲಿಯಾ ವಿರುದ್ಧ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್ ಫೈನಲ್‌ಗೆ ಮುನ್ನಡೆಸಿದ್ದರು. ಆದರೆ, ಇತ್ತೀಚಿನ ಎರಡು ಸರಣಿಗಳಾದ ನ್ಯೂಜಿಲೆಂಡ್ ವಿರುದ್ಧದ ಹಾಗೂ ಮತ್ತು ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಸರಣಿಯಲ್ಲಿ ತಂಡದ ಪ್ರದರ್ಶನ ಕಳಪೆಯಾಗಿತ್ತು. .

ಇಂಗ್ಲೆಂಡ್‌ನಲ್ಲಿ ನಡೆಯಲಿರುವ ಐದು ಟೆಸ್ಟ್ ಪಂದ್ಯಗಳ ಸರಣಿಗೆ ಭಾರತ ತಂಡಕ್ಕೆ ಹೊಸ ಟೆಸ್ಟ್ ನಾಯಕನ ಆಯ್ಕೆಯಾಗಲಿದೆ. ಈ ಸ್ಥಾನಕ್ಕೆ ಜಸ್‌ಪ್ರೀತ್ ಬುಮ್ರಾ, ಕೆಎಲ್ ರಾಹುಲ್, ಶುಭಮನ್ ಗಿಲ್ ಮತ್ತು ರಿಷಭ್ ಪಂತ್ ಸಂಭಾವ್ಯ ಆಯ್ಕೆಯಾಗಿದ್ದಾರೆ.

Read More
Next Story