Drunk and Drive| ಮರಕ್ಕೆ ಕಾರು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳ ದುರ್ಮರಣ
x
ಕಾರು ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.

Drunk and Drive| ಮರಕ್ಕೆ ಕಾರು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳ ದುರ್ಮರಣ

ಮೃತ ವಿದ್ಯಾರ್ಥಿಗಳು ಗೊಟ್ಟಿಗೆರೆಯ ಟಿ ಜಾನ್ ಕಾಲೇಜಿನ ವಿದ್ಯಾರ್ಥಿಗಳು ಎಂದು ತಿಳಿದುಬಂದಿದ್ದು, ಘಟನಾ ಸ್ಥಳಕ್ಕೆ ಬನ್ನೇರುಘಟ್ಟ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.


ಕುಡಿದ ಮತ್ತಿನಲ್ಲಿ ನಿರ್ಲಕ್ಷದಿಂದ ಕಾರು ಚಲಾಯಿಸಿದ ಪರಿಣಾಮದ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದು ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟು ಇನ್ನಿಬ್ಬರು ವಿದ್ಯಾರ್ಥಿಗಳು ತೀವ್ರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ಬನ್ನೇರುಘಟ್ಟ ಬಳಿ ರಾಗಿಹಳ್ಳಿ ಅರಣ್ಯ ಪ್ರದೇಶದ ರಸ್ತೆ ಬಳಿ ಸೋಮವಾರ ತಡರಾತ್ರಿ ಸಂಭವಿಸಿದೆ.

ಮೃತರನ್ನು ಕೇರಳ ಮೂಲದ ಸಾಹಹುಕ್ (28) ಹಾಗೂ ಅರ್ಶು (23) ಎಂದು ಗುರುತಿಸಲಾಗಿದೆ. ಗಾಯಗೊಂಡ ದೇವನಾರಾಯಣ ಮತ್ತು ಸಾಹಿಲ್ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮೃತ ವಿದ್ಯಾರ್ಥಿಗಳು ಗೊಟ್ಟಿಗೆರೆಯ ಟಿ ಜಾನ್ ಕಾಲೇಜಿನ ವಿದ್ಯಾರ್ಥಿಗಳು ಎಂದು ತಿಳಿದುಬಂದಿದ್ದು, ಘಟನಾ ಸ್ಥಳಕ್ಕೆ ಬನ್ನೇರುಘಟ್ಟ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಕುಡಿದ ಮತ್ತಿನಲ್ಲಿ ವೇಗವಾಗಿ ಕಾರು ಚಲಾಯಿಸಿ ಮರಕ್ಕೆ ಡಿಕ್ಕಿ ಹೊಡೆದಿದ್ದಾರೆ ಎಂದು ತಿಳಿದುಬಂದಿದೆ.

Read More
Next Story